ನವದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಹೃದಯ ಸಂಬಂಧಿ ಸಮಸ್ಯೆಗಳಿಂದ ಸ್ಯಾನ್ ಫ್ರಾನ್ಸಿಸ್ಕೋದ ಐಸಿಯುನಲ್ಲಿ ತೀವ್ರ ಅಸ್ವಸ್ಥರಾಗಿದ್ದಾರೆ ಅವರಿನ್ನೂ ಜೀವಂತವಾಗಿದ್ದಾರೆ ಎಂದು ಅವರ ಮ್ಯಾನೇಜರ್ ನಿರ್ಮಲಾ ಬಚಾನಿ ತಿಳಿಸಿದ್ದಾರೆ.
ಈ ನಡುವೆ ಮಾಧ್ಯಮದಲ್ಲಿ ಬರುತ್ತಿರುವ ಅವರ ಸಾವಿನ ಸುದ್ದಿಯ ಕುರಿತಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಾಕೀರ್ ಹುಸೇನ್ ಸಹೋದರಿ ಖುರ್ಷಿದ್ ಸುಳ್ಳು ಸುದ್ದಿಯನ್ನು ಹರಡಬೇಡಿ ಅವರಿನ್ನೂ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
"ನನ್ನ ಸಹೋದರ ಈ ಸಮಯದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಭಾರತ ಮತ್ತು ಪ್ರಪಂಚದಾದ್ಯಂತ ಇರುವ ಅವರ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಲು ನಾವು ಕೇಳುತ್ತಿದ್ದೇವೆ. ಆದರೆ ಅವರನ್ನೂ ಇನ್ನೂ ಮುಗಿಸಬೇಡಿ ಎಂದು ಮನವಿ ಮಾಡಿದ್ದಾರೆ.'ಜಾಕೀರ್ ನಿಧನದ ಬಗ್ಗೆ ತಪ್ಪು ಮಾಹಿತಿಯನ್ನು ಅನುಸರಿಸದಂತೆ ನಾನು ಎಲ್ಲಾ ಮಾಧ್ಯಮಗಳಿಗೆ ವಿನಂತಿಸುತ್ತೇನೆ. ಅವರು ತುಂಬಾ ಗಂಭೀರ ಸ್ಥಿತಿಯಲ್ಲಿ ಇನ್ನೂ ನಮ್ಮೊಂದಿಗಿದ್ದಾರೆ. ಅವರಿನ್ನೂ ನಿಧನವಾಗಿಲ್ಲ. ಹಾಗಾಗಿ ಮಾಧ್ಯಮದವರು ಸುಳ್ಳು ವದಂತಿಯನ್ನು ಹರಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ ಎಂದು ಪಿಟಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
Zakir Hussain critical due to complications from idiopathic pulmonary fibrosis; reports of his death incorrect: Family rep in San Francisco. pic.twitter.com/iKgTvQyIQD
— Press Trust of India (@PTI_News) December 15, 2024
ತಬಲಾವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ದ 73 ವರ್ಷದ ಯುಎಸ್ ಮೂಲದ ಸಂಗೀತಗಾರನಿಗೆ ರಕ್ತದೊತ್ತಡ ಸಮಸ್ಯೆ ಇತ್ತು ಎಂದು ಹುಸೇನ್ ಅವರ ಮ್ಯಾನೇಜರ್ ನಿರ್ಮಲಾ ಬಚಾನಿ ಹೇಳಿದರು.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾದ ತಾಳವಾದ್ಯ ವಾದಕರಾಗಿರುವ ಜಾಕೀರ್ ಹುಸೇನ್ 1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣವನ್ನು ಪಡೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.