Bigg Boss Gold Suresh: ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ.
Bigg Boss Gold Suresh: ಬಿಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಗೋಲ್ಡ್ ಸುರೇಶ್ ದಿಢೀರ್ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಅವರು ಏಕೆ ಹೊರಬಂದರು ಅನ್ನೋದರ ಬಗ್ಗೆ ಹಲವಾರು ಗಾಳಿಸುದ್ದಿಗಳು ಹರದಾಡಿದ್ದವು. ಇದೀಗ ಈ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿದೆ. ಇದಕ್ಕೆ ಕಾರಣವೇನು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಅತ್ಯಂತ ಪ್ರಬಲ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್ ಈ ವಾರ ಕ್ಯಾಪ್ಟನ್ ಸಹ ಆಗಿದ್ದರು. ಆದರೆ ಇದ್ದಕ್ಕಿದ್ದಂತೆಯೇ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ʼಗೋಲ್ಡ್ ಸುರೇಶ್ ಮನೆಯಲ್ಲಿ ತುರ್ತುಪರಿಸ್ಥಿತಿ ಉಂಟಾಗಿದ್ದು, ಅವರ ಅವಶ್ಯಕತೆ ಬಿಗ್‌ಬಾಸ್ ಮನೆಗಿಂತಲೂ ಅವರ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಗೋಲ್ಡ್ ಸುರೇಶ್ ಹೆಚ್ಚು ತಡ ಮಾಡದೆ ತಮ್ಮ ವಸ್ತುಗಳನ್ನ ಪ್ಯಾಕ್ ಮಾಡಿಕೊಂಡು ಹೊರಗಡೆ ಬರಬೇಕುʼ ಅಂತಾ ಬಿಗ್ ಬಾಸ್ ಆದೇಶಿಸಿದ್ದರು.
ಈ ವಿಚಾರ ಹೊರಬರುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಗೋಲ್ಡ್ ಸುರೇಶ್ ತಂದೆ ನಿಧನರಾಗಿದ್ದಾರೆ ಅನ್ನೋ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಅಲ್ಲದೇ ಐಷಾರಾಮಿಯಾಗಿ ಜೀವನ ನಡೆಸುತ್ತಿರುವ ಗೋಲ್ಡ್ ಸುರೇಶ್ ಅವರು ಕೋಟಿ ಕೋಟಿ ಸಾಲ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಬಿಗ್ ಬಾಸ್ ಮನೆಯಿಂದ ತುರ್ತಾಗಿ ಹೊರಗೆ ಕರೆಸಲಾಗಿದೆ ಅಂತಾನೂ ಹೇಳಲಾಗುತ್ತಿದೆ.
ಇನ್ನೂ ಈ ಬಗ್ಗೆ ಸುರೇಶ್ ತಂದೆ ಶಿವಗೌಡ ಪ್ರತಿಕ್ರಿಯಿಸಿದ್ದು, ʼನನಗೆ ಏನೂ ಆಗಿಲ್ಲ, ಇನ್ನೂ ಬದುಕಿದ್ದೇನೆ. ನಮ್ಮ ಮನೆಯಲ್ಲೂ ಎಲ್ಲರೂ ಹುಷಾರಾಗಿದ್ದಾರೆ. ನನ್ನ ಕಾಲಿಗೆ ಅಷ್ಟೇ ನೋವಾಗಿದೆ, ನಾನು ಸತ್ತಿಲ್ಲ. ನನ್ನ ಬಗ್ಗೆ ಸುಳ್ಳು ವದಂತಿಗಳನ್ನು ಹಬ್ಬಿಸಲಾಗಿದೆʼ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಬಿಗ್ ಬಾಸ್‌ನಲ್ಲಿ ʼನನ್ನ ಮಗ ಉತ್ತಮವಾಗಿ ಆಟವಾಡುತ್ತಿದ್ದಾನೆ. ಉತ್ತರ ಕರ್ನಾಟಕಕ್ಕೆ ಹೆಸರು ತರುತ್ತಿದ್ದಾನೆʼ ಅಂತಲೂ ಸುರೇಶ್ ತಂದೆ ಹೇಳಿದ್ದಾರೆ. ಗೋಲ್ಡ್ ಸುರೇಶ್ ಈ ವಾರ ಮನೆಯ ಕ್ಯಾಪ್ಟನ್ ಆಗಿದ್ದರು. ಕ್ಯಾಪ್ಟನ್ ಆಗಬೇಕೆಂಬ ಅವರ ಬಹುದಿನಗಳ ಆಸೆ ಈ ವಾರ ಈಡೇರಿತ್ತು. ಅಲ್ಲದೇ ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್‌ನಿಂದಲೂ ಬಜಾವಾಗಿದ್ದ ಸುರೇಶ್ ಸೇಫ್ ಆಗಿದ್ದರು.
ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಹೆಣ್ಣು ಮಗುವಿನ ತಂದೆಯಾಗಿರುವ ಸುರೇಶ್, ತಾವು ಮೈ ಮೇಲೆ ಹಾಕಿಕೊಳ್ಳುವ ಕೋಟ್ಯಂತರ ಬೆಲೆ ಬಾಳುವ ಚಿನ್ನದಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡಿದ್ದರು.
ಒಟ್ನಲ್ಲಿ ಸುಳ್ಳು ವದಂತಿಗಳ ನಡುವೆ ಗೋಲ್ಡ್ ಸುರೇಶ್ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಅವರಿಗೆ ಬಿಗ್ ಬಾಸ್ ಮತ್ತೊಂದು ಅವಕಾಶ ನೀಡುತ್ತದೆಯೇ? ಅನ್ನೋದನ್ನ ಕಾದು ನೋಡಬೇಕಿದೆ.