"ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ"

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು.ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ.

Written by - Manjunath N | Last Updated : Jan 8, 2025, 10:00 PM IST
  • ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ.
  • ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ.
  • ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ.
 "ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ" title=

ಬೆಂಗಳೂರು: ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಇಂದು ಮುಖ್ಯವಾಹಿನಿಗೆ ಬರಮಾಡಿಕೊಂಡು ಮಾತನಾಡಿದರು.

ಇದನ್ನೂಓದಿ: ಈ ತೆರಿಗೆದಾರರಿಗೆ ಗುಡ್ ನ್ಯೂಸ್...! ಈಗ ಸ್ವಲ್ಪ ನಿಟ್ಟುಸಿರು ಬಿಟ್ಟು ತೆರಿಗೆ ತುಂಬಿ ..!

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು.ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ.ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ ಎಂದು ತಿಳಿಸಿದರು.

ಇದನ್ನೂಓದಿ: ವಿದ್ಯಾರ್ಥಿಗಳೇ ಜಾಕ್‌ಪಾಟ್‌... ಮಕರ ಸಂಕ್ರಾಂತಿ ಮರುದಿನದಿಂದಲೇ ಜ.19ರವರೆಗೆ ಸತತ 6 ದಿನ ಕಡ್ಡಾಯ ರಜೆ ಘೋಷಿಸಿದಈ ರಾಜ್ಯ ಸರ್ಕಾರ! ಬ್ಯಾಂಕ್ ಕೂಡ ಕೆಲಸ ನಿರ್ವಹಿಸುವುದಿಲ್ಲ

ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ‌ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ. ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ, ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ. ಬಡವರು ಗೌರವಯುತವಾಗಿ ಬದುಕಲು ಅವಕಾಶ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ.ನಕ್ಸಲಿಸಂ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಬಹಿರಂಗವಾಗಿ ಹೇಳಿದ್ದೆ. ಅವರನ್ನು ಕ್ರಿಮಿನಲ್‌ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ.ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News