Team India: ಜನವರಿ ಕೊನೆಯ ವಾರದಿಂದ ಇಂಗ್ಲೆಂಡ್ ವಿರುದ್ಧ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ, ಟಿ20 ಹಾಗೂ ಏಕದಿನ ಸರಣಿಗೆ ಕೆಲವೇ ಗಂಟೆಗಳಲ್ಲಿ ಟೀಂ ಇಂಡಿಯಾ ಪ್ರಕಟವಾಗುವ ಸಾಧ್ಯತೆ ಇದೆ. ವರದಿ ಪ್ರಕಾರ ಈ ಎರಡು ಟೂರ್ನಿಗಳಿಗೆ ಜನವರಿ 11ರೊಳಗೆ ಟೀಂ ಇಂಡಿಯಾ ಪ್ರಕಟವಾಗಲಿದೆ. ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿ ನಿರ್ಣಾಯಕವಾಗಿದೆ. ಹಾಗಾಗಿಯೇ ಈ ಎರಡು ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾರಿಗೆ ತಂಡದಲ್ಲಿ ಸ್ಥಾನ ಸಿಗುತ್ತದೆ, ಯಾರನ್ನು ಹೊರಕ್ಕೆ ಕಳುಹಿಸಲಾಗುತ್ತದೆ ಎಂಬ ಚರ್ಚೆ ನಡೆಯುತ್ತಿದೆ. ಈ ಚರ್ಚೆಗಳ ನಡುವೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ ಎಂಬ ವರದಿಗಳಿವೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಇಂಗ್ಲೆಂಡ್ ವಿರುದ್ಧದ T20I ಮತ್ತು ODI ಸರಣಿಯಿಂದ ರಾಹುಲ್‌ಗೆ ವಿಶ್ರಾಂತಿ ನೀಡಲಾಗುತ್ತದೆ. ಆದರೆ, ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿರುವ ತಂಡದಲ್ಲಿ ರಾಹುಲ್ ಸ್ಥಾನ ಪಡೆಯಲಿದ್ದಾರೆ ಎಂದು ಆಯ್ಕೆ ಸಮಿತಿ ಭರವಸೆ ನೀಡಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಯನ್ನು ಆಡದೇ ರಾಹುಲ್ ಚಾಂಪಿಯನ್ಸ್ ಟ್ರೋಫಿ ಪ್ರವೇಶಿಸಲಿದ್ದಾರೆ.
ಇದನ್ನೂ ಓದಿ-ವಿರಾಟ್ ಕೊಹ್ಲಿ ಬಗ್ಗೆ ಆಸ್ಟ್ರೇಲಿಯಾ ಆಟಗಾರ ಸ್ಯಾಮ್ ಹೇಳಿದ್ದೇನು? ಕೇಳಿದ್ರೆ ಪಕ್ಕಾ ಶಾಕ್ ಆಗ್ತೀರಾ!
ಆಯ್ಕೆ ಸಮಿತಿಯ ನಿರ್ಧಾರ ಆಘಾತಕಾರಿಯಾಗಿದೆ. ಏಕೆಂದರೆ ರಾಹುಲ್ ಟಿ20 ತಂಡದಲ್ಲಿ ಬಹಳ ದಿನಗಳಿಂದ ಇರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಟಿ20 ಸರಣಿಗೆ ಆಯ್ಕೆಯಾಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಏಕದಿನ ಸರಣಿಯಲ್ಲಿ ರಾಹುಲ್‌ಗೆ ವಿಶ್ರಾಂತಿ ನೀಡುವುದು ಖಂಡಿತವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತದೆ. ಏಕೆಂದರೆ, ಟೀಂ ಇಂಡಿಯಾ ಈಗಾಗಲೇ ಆಸ್ಟ್ರೇಲಿಯಾದಿಂದ ವಾಪಸಾಗಿದೆ. ಫೆಬ್ರವರಿ 6 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಇಂತಹ ಸಂದರ್ಭಗಳಲ್ಲಿ ರಾಹುಲ್‌ಗೆ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವಿದೆ.
ಇದನ್ನೂ ಓದಿ-ಚಹಾಲ್ ಅಲ್ಲ.. ವಿಚ್ಛೇದನ ಹಾದಿಯಲ್ಲಿ ಮತ್ತೊಬ್ಬ ಟೀಂ ಇಂಡಿಯಾ ಕ್ರಿಕೆಟಿಗ! ಕ್ರೀಡಾ ಲೋಕದಲ್ಲೂ ಡಿವೋರ್ಸ್ ಹಾವಳಿ..
ಒಂದು ವೇಳೆ ರಾಹುಲ್ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವುದು ಖಚಿತವಾಗಿದ್ದರೆ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವುದು ಅವರಿಗೆ ಹಾಗೂ ತಂಡಕ್ಕೆ ಪೂರ್ವ ತಯಾರಿಯ ದೃಷ್ಟಿಯಿಂದ ಒಳ್ಳೆಯದಾಗುತ್ತಿತ್ತು. ಆದರೆ ಏಕದಿನ ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂಬ ವರದಿಗಳಿವೆ. ಚಾಂಪಿಯನ್ಸ್ ಟ್ರೋಫಿಯಂತಹ ದೊಡ್ಡ ಟೂರ್ನಿಗೆ ಯಾವುದೇ ಸಿದ್ಧತೆ ಇಲ್ಲದೆ ಹೋಗಿರುವುದು ರಾಹುಲ್ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ. ಏಕೆಂದರೆ ಟೂರ್ನಿಯಲ್ಲಿ ರಾಹುಲ್ ಕಳಪೆ ಪ್ರದರ್ಶನ ನೀಡಿದರೆ ಅದು ಅವರಿಗಷ್ಟೇ ಅಲ್ಲ ತಂಡದ ಮೇಲೂ ಪರಿಣಾಮ ಬೀರುತ್ತದೆ.
ರಾಹುಲ್ ಅವರಿಗೆ ಆಯ್ಕೆ ಮಂಡಳಿ ವಿಶ್ರಾಂತಿ ನೀಡಲು ಕಾರಣವೂ ಇತ್ತು. ಸದ್ಯದಲ್ಲೇ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಮಗುವಿಗೆ ಜನ್ಮ ನೀಡಲಿದ್ದಾರೆ.. ಹೌದು ರಾಹುಲ್ ಮತ್ತು ಅಥಿಯಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ರಾಹುಲ್ ಕುಟುಂಬದೊಂದಿಗೆ ಇರಲು ಬಯಸಬಹುದು. 2023 ರ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ರಾಹುಲ್ ಅವರನ್ನು ಮುಖ್ಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲು ಆಯ್ಕೆ ಸಮಿತಿಯು ಈಗಾಗಲೇ ನಿರ್ಧರಿಸಿದೆ. ಈ ವೇಳೆ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಮತ್ತು ರಿಷಬ್ ಪಂತ್‌ಗೆ ಅವಕಾಶ ನೀಡುವ ಮೂಲಕ ಟೀಮ್ ಇಂಡಿಯಾ ಬ್ಯಾಕ್‌ಅಪ್ ವಿಕೆಟ್-ಕೀಪರ್ ಅನ್ನು ನಿರ್ಧರಿಸುವ ಸಾಧ್ಯತೆಯಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.