ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಕೊರೊನಾ ಟೆಸ್ಟ್ ರಿಪೋರ್ಟ್ ನೆಗೆಟಿವ್, ಆರೋಗ್ಯ ಸ್ಥಿತಿ ಸ್ಥಿರ

ಸತ್ಯೇಂದ್ರ ಜೈನ್ ಅವರ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಆದರೆ, ಇದುವರೆಗೂ ಕೂಡ ಅವರ ಜ್ವರ ಕಮ್ಮಿಯಾಗಿಲ್ಲ ಎಂದು ಹೇಳಿದ್ದಾರೆ. ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Last Updated : Jun 16, 2020, 03:06 PM IST
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಕೊರೊನಾ ಟೆಸ್ಟ್ ರಿಪೋರ್ಟ್ ನೆಗೆಟಿವ್, ಆರೋಗ್ಯ ಸ್ಥಿತಿ ಸ್ಥಿರ title=

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಕರೋನಾ ವೈರಸ್ ವರದಿ ನಕಾರಾತ್ಮಕವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಅವರಿಗೆ ಇನ್ನೂ ಜ್ವರವಿದೆ. ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆ ಹಿನ್ನೆಲೆ ಸತ್ಯೇಂದ್ರ ಜೈನ್ ಅವರನ್ನು ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಲ್ಲಿ 42 ಸಾವಿರಕ್ಕೂ ಹೆಚ್ಚು ಕರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ.

ವಿಪತ್ತು ನಿರ್ವಹಣ ಸಮಿತಿ ಸಭೆ ಮುಂದೂಡಿಕೆ
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ನಿವಾಸದಲ್ಲಿ ಇಂದು ನಡೆಯಬೇಕಿದ್ದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಎರಡು ದಿನಗಳವರೆಗೆ ಮುಂದೂಡಲಾಗಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಈ ಸಭೆಯಲ್ಲಿ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಬೇಕಿದ್ದವು ಹಾಗೂ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿತ್ತು. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹೊರತಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೂಡ ಈ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಜ್ವರ ಮತ್ತು ಗಂಟಲು ನೋವಿನಿಂದ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಈ ಸಭೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಕಳೆದ 2 ದಿನಗಳಿಂದ ನಡೆದ ಪ್ರಮುಖ ಸಭೆಯಲ್ಲಿ ಸತ್ಯೇಂದ್ರ ಭಾಗವಹಿಸಿದ್ದರು
ಕಳೆದ 48 ಗಂಟೆಗಳಲ್ಲಿ ನಡೆದ ಪ್ರಮುಖ ಸಭೆಗಳಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಉಪಸ್ಥಿತರಿದ್ದರು. ಈ ಸಭೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅವರ ಸಭೆಯೂ ಕೂಡ ಶಾಮೀಲಾಗಿದೆ. ಅಮಿತ್ ಶಾ ಅವರಲ್ಲದೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೂಡ ದೆಹಲಿ ಮತ್ತು ಕೇಂದ್ರಕ್ಕೆ ಸಂಬಂಧಿಸಿದ ಅನೇಕ ದೊಡ್ಡ ಅಧಿಕಾರಿಗಳೊಂದಿಗೆ ಈ ಸಭೆಯಲ್ಲಿ ಉಪಸ್ಥಿತರಿದ್ದರು. ಇದಲ್ಲದೆ ಆರೋಗ್ಯ ಸಚಿವರಾಗಿ ಅವರು ದೆಹಲಿಯಲ್ಲಿ ಸೋಂಕಿನ ವಿರುದ್ಧ ಹೋರಾಟ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲು ನಡೆದ ಸಭೆಯಲ್ಲಿಯೂ ಕೂಡ ಅವರು ಉಪಸ್ಥಿತರಿದ್ದರು.

Trending News