ಬೆಂಗಳೂರು: ಅಯೋಧ್ಯೆಯಲ್ಲಿ ಇಂದು ನಡೆಯುತ್ತಿರುವ ಶ್ರೀರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) 'ಇದು ಭಾವನಾತ್ಮಕ ಸನ್ನಿವೇಶ' ಎಂದಿದ್ದಾರೆ.
ಮೊದಲ ಟ್ವೀಟ್ ನಲ್ಲಿ 'ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ' ಎಂದಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
1/4— H D Kumaraswamy (@hd_kumaraswamy) August 5, 2020
ಇನ್ನೊಂದು ಟ್ವೀಟ್ ನಲ್ಲಿ 'ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ' ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.
3/4— H D Kumaraswamy (@hd_kumaraswamy) August 5, 2020
ಮತ್ತೊಂದು ಟ್ವೀಟ್ ನಲ್ಲಿ 'ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ' ಎಂದು ಹರಸಿದ್ದಾರೆ.
ಮಗದೊಂದು ಟ್ವೀಟ್ ನಲ್ಲಿ 'ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು.
ಜೈ ಶ್ರೀರಾಮ' ಎಂದಿದ್ದಾರೆ.