ಮಾಸ್ಕೋ: ಮುಂದಿನ 48 ಗಂಟೆಗಳಲ್ಲಿ ವಿಶ್ವ ಕೊರೊನಾ ವೈರಸ್ ವಿರುದ್ಧದ ತನ್ನ ಹೋರಾಟದಲ್ಲಿ ಗೆಲುವು ಸಾಧಿಸಲಿದೆ ಎನ್ನಲಾಗುತ್ತಿದೆ. ಈ ಕುರಿತು ಹೇಳಿಕೆ ನೀಡಿರುವ ರಷ್ಯಾ, ಆಗಸ್ಟ್ 12 ರಂದು ರಷ್ಯಾ ತನ್ನ ದೇಶದಲ್ಲಿ ಅಭಿವೃದ್ಧಿಗೊಳಿಸಿರುವ ಲಸಿಕೆಯ ಅಧಿಕೃತ ನೋಂದಣಿ ಪೂರ್ಣಗೊಳಿಸುವುದಾಗಿ ಹೇಳಿಕೊಂಡಿದೆ. ಗಾಮಾಲೆಯಾ ರಿಸರ್ಚ್ ಇನ್ಸ್ಟಿಟ್ಯೂಟ್ ಹಾಗೂ ರಷ್ಯಾದ ರಕ್ಷಣಾ ಸಚಿವಾಲಯ ಈ ಲಸಿಕೆಯನ್ನು ಜಂಟಿಯಾಗಿ ಅಭಿವೃದ್ಧಿಗೊಳಿಸಿವೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ರಷ್ಯಾ,ಮುಂದಿನ ತಿಂಗಳು ಲಸಿಕೆ ಅಭಿವೃದ್ಧಿ ಕಾರ್ಯ ಆರಂಭಗೊಳ್ಳಲಿದೆ ಎಂದು ಹೇಳಿದೆ. ಈ ಕುರಿತಾದ ಮಾನವ ಪರೀಕ್ಷೆಯ ಮೂರನೆಯ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಅತಿ ಶೀಘ್ರದಲ್ಲಿಯೇ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಲಾಗುವುದು ಎಂದೂ ಕೂಡ ಹೇಳಲಾಗುತ್ತಿದೆ.
ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ರಷ್ಯಾದ ಆರೋಗ್ಯ ಸಚಿವ ಮಿಖೈಲ್ ಮುರಾಶ್ಕೋ, ಸೆಪ್ಟೆಂಬರ್ ಕೊನೆಯ ವಾರದ ವೇಳೆಗೆ ವ್ಯಾಕ್ಸಿನ್ ಉತ್ಪಾದನೆಯನ್ನು ಪೂರ್ಣಗೊಳಿಸಲಾಗುವುದು ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೂ ಮೊದಲು ಪ್ರಕಟಗೊಂಡ ವರದಿಯೊಂದರ ಪ್ರಕಾರ ರಷ್ಯಾದ ಗಾಮಾಲೆಯಾ ಇನ್ಸ್ಟಿಟ್ಯೂಟ್ ನಲ್ಲಿ ಅಭಿವೃದ್ಧಿಗೊಳಿಸಲಾಗಿರುವ ಈ ವ್ಯಾಕ್ಸಿನ್ ಅನ್ನು ಆಗಸ್ಟ್ 10ರವರೆಗೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.
ಈ ಬಗ್ಗೆ ಹೇಳಿಕೆ ನೀಡಿದ್ದ ರಷ್ಯಾದ ಮಾಸ್ಕೋನಲ್ಲಿರುವ ಗಾಮಾಲೆಯಾ ಇನ್ಸ್ಟಿಟ್ಯೂಟ್ ವಿಜ್ಞಾನಿಗಳು, ವ್ಯಾಕ್ಸಿನ್ ಅಭಿವೃದ್ಧಿಗೊಂಡ ಬಳಿಕ ಈ ವ್ಯಾಕ್ಸಿನ್ ಅನ್ನು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರತ ಫ್ರಂಟ್ ಲೈನ್ ಆರೋಗ್ಯ ಕಾರ್ಯಕರ್ತರಿಗೆ ಪ್ರಾಥಮಿಕವಾಗಿ ಈ ವ್ಯಾಕ್ಸಿನ್ ಅನ್ನು ನೀಡಲಾಗುವುದು. ಮುಂದೆಯೂ ಕೂಡ ಅವರು ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳ ನಡುವೆ ಇರುವ ಅವಶ್ಯಕತೆ ಇದ್ದ ಕಾರಣ ಅವರಿಗೆ ಈ ವ್ಯಾಕ್ಸಿನ್ ಮೊದಲು ನೀಡಲಾಗುವುದು ಎಂದು ಅವರು ಹೇಳಿದ್ದರು.
ಇನ್ನೊಂದೆಡೆ ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊವಿಡ್ 19 ಕುರಿತು ಕೂಡ ಹೇಳಿಕೆ ನೀಡಿದ್ದ ಭಾರತೀಯ ಮೂಲದ ದೀಪಕ್ ಪಾಲಿವಾಲ್ ಕೂಡ ವ್ಯಾಕ್ಸಿನ್ ಅಭಿವೃದ್ಧಿ ಕುರಿತು ತನ್ನ ವಿಶ್ವಾಸ ವ್ಯಕ್ತಪಡಿಸಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.