ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದೆ.
ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಾಲ್ಕು ದಿನಗಳ ರಾಜ್ಯ ಪ್ರವಾಸ ನಿನ್ನೆಯಷ್ಟೇ ದೆಹಲಿಗೆ ಹಿಂದಿರುಗಿದ್ದು, ಮತ್ತೆ ಫೆ.24ರಿಂದ ಮತ್ತೆ ರಾಹುಲ್ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎರಡನೇ ಹಂತದ ಚುನಾವಣಾ ಪ್ರಚಾರವಾಗಿ ರಾಹುಲ್ ಗಾಂಧಿ ಫೆಬ್ರವರಿ 24, 25, 26 ರಂದು ಪುನಃ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮುಂಬೈ ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಅವರು ಮೂರು ದಿನಗಳ ಕಾಲ ಪ್ರವಾಸ ಮಾಡಲಿದ್ದು, ಗುಜರಾತ್ ವಿಜಯ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಎರಡನೇ ರಾಜ್ಯ ಪ್ರವಾಸ ಮುಂಬೈ-ಕರ್ನಾಟಕ ಭಾಗದಲ್ಲಿ ಫೆಬ್ರವರಿ 24ರಿಂದ ಮೂರು ದಿನ ನಡೆಯಲಿದೆ. ಗುಜರಾತ್ ವಿಜಯ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರಿಯಲಿದೆ. ಇದರಿಂದ ಬಿಜೆಪಿ ನಾಯಕರು ಭಯಭೀತರಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ.#RGinKarnataka #JanaAshirwadaYatre
— Siddaramaiah (@siddaramaiah) February 13, 2018