ನವದೆಹಲಿ: ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (Dr Manmohan Singh) ಅವರು ಇಂದು 88ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಅವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಪ್ರಾಮಾಣಿಕತೆ, ಸಭ್ಯತೆ ಮತ್ತು ಸಮರ್ಪಣೆಯ ಪ್ರಧಾನಿ ಎಂದು ಹೊಗಳಿದರು.
ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ ನಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯ ಕೋರಿರುವ ರಾಹುಲ್ ಗಾಂಧಿ, ಡಾ. ಮನಮೋಹನ್ ಸಿಂಗ್ ಅವರಂತಹ ಪ್ರಧಾನ ಮಂತ್ರಿಯ ಅನುಪಸ್ಥಿತಿ ಭಾರತವನ್ನು ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
India feels the absence of a PM with the depth of Dr Manmohan Singh. His honesty, decency and dedication are a source of inspiration for us all.
Wishing him a very happy birthday and a lovely year ahead.#HappyBirthdayDrMMSingh
— Rahul Gandhi (@RahulGandhi) September 26, 2020
ಡಾ.ಮನಮೋಹನ್ ಸಿಂಗ್ ಅವರಂತಹ ಪ್ರಧಾನ ಮಂತ್ರಿಯ ಅನುಪಸ್ಥಿತಿಯನ್ನು ಭಾರತ ಭಾವಿಸಿದೆ ಎಂದು ರಾಹುಲ್ ಗಾಂಧಿ ಅವರ ಟ್ವೀಟ್ ನಲ್ಲಿ ಬರೆದಿದ್ದಾರೆ. ಅವರ ಪ್ರಾಮಾಣಿಕತೆ, ಸಭ್ಯತೆ ಮತ್ತು ಸಮರ್ಪಣೆ ನಮ್ಮೆಲ್ಲರಿಗೂ ಸ್ಫೂರ್ತಿಯ ಮೂಲವಾಗಿದೆ. ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.
'ನರಸಿಂಹರಾವ್ ಬಯಸಿದ್ದರೆ 1984 ರ ಗಲಭೆ ತಪ್ಪಿಸಬಹುದಿತ್ತು'
ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ವಿಜಯ ಪತಾಕೆ ಹಾರಿಸಿದ ಬಳಿಕ ಯುಪಿಎ ಸರ್ಕಾರದಲ್ಲಿ 2004 ಮತ್ತು 2014 ರ ನಡುವೆ ಡಾ. ಮನಮೋಹನ್ ಸಿಂಗ್ ಭಾರತದ 13 ನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಖ್ಯಾತ ಅರ್ಥಶಾಸ್ತ್ರಜ್ಞರೂ ಆಗಿರುವ ಡಾ. ಮನಮೋಹನ್ ಸಿಂಗ್ 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದರು. ಪ್ರಸ್ತುತ ಅವರು ರಾಜಸ್ಥಾನದ ರಾಜ್ಯಸಭಾ ಸದಸ್ಯರಾಗಿದ್ದಾರೆ.