ಚುನಾವಣಾ ರಣಕಹಳೆ ಊದಲು ಸಜ್ಜಾದ ಜೆಡಿಎಸ್!

Last Updated : Feb 16, 2018, 06:48 PM IST
ಚುನಾವಣಾ ರಣಕಹಳೆ ಊದಲು ಸಜ್ಜಾದ ಜೆಡಿಎಸ್!  title=

 

ಬೆಂಗಳೂರು: ಜೆಡಿಎಸ್ ಪಕ್ಷ  ಈ ಬಾರಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗ ಆ ಎರಡು ರಾಷ್ಟ್ರೀಯ ಪಕ್ಷಗಳಿಗೂ ಮೊದಲೇ ಅಭ್ಯರ್ಥಿಗಳಿಗೆ ಸೀಟುಗಳನ್ನು ನಾಳೆ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ವಿತರಿಸುವ ಮೂಲಕ  ಕಾಂಗ್ರೆಸ್ ಮತ್ತು ಬಿಜೆಪಿಗೆ ಶಾಕ್ ನೀಡಲು ಜೆಡಿಎಸ್ ಸಿದ್ದವಾಗಿದೆ.

ನಾಳೆ ಯಲಹಂಕದ ಸಮೀಪ ನಡೆಯುವ ಬೃಹತ್ ಸಮಾವೇಶದಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಎನ್‍ಸಿಪಿ ಮತ್ತು ಬಿಎಸ್ಪಿ ಮುಖಂಡರು ಸಹ ಪಾಲ್ಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ  ಪೂರ್ಣ ಪ್ರಮಾಣದಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿರುವ ಜೆಡಿಎಸ್ ಈಗ ತನ್ನ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಳಿಸಿದೆ. ಈ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ, ಪಿಜಿಆರ್ ಸಿಂಧ್ಯಾ, ಎಚ್.ಡಿ.ರೇವಣ್ಣ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ. 

 ಮಧ್ಯಾಹ್ನ ಸಮಾವೇಶ ನಡೆಯಲಿದ್ದು, ಜೆಡಿಎಸ್ ಈ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈಗಾಗಲೇ ಬಿಎಸ್‍ಪಿ ಹಾಗೂ ಎನ್‍ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಈ ಜೆಡಿಎಸ್ ಸಮಾವೇಶಕ್ಕೆ ಮಾಯಾವತಿ ಅವರು ಕೂಡಾ ಪಾಲ್ಗೊಳ್ಳುವ ಸಾದ್ಯತೆ ಇದೆ. ಸಮಾವೇಶದಲ್ಲಿ ನಾಲ್ಕು ಲಕ್ಷ ಜನರು ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 

Trending News