ಬೆಂಗಳೂರು: ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಲಿಂಗಾಯಿತರಿಗೂ ಮೀಸಲಾತಿ ಹಾಗೂ ಅಭಿವೃದ್ಧಿ ನಿಗಮ ಪ್ರಾಧಿಕಾರ ರಚನೆಗೆ ಸರ್ಕಾರದ ಮೇಲೆ ಒತ್ತಡಗಳು ಹೆಚ್ಚಿವೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಾಧಿಕಾರ ರಚನೆಗೆ ಒತ್ತಾಯಿಸಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ನೇತೃತ್ವದಲ್ಲಿ ಇಂದು ಹಲವು ನಾಯಕರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಒತ್ತಡ ಹೇರಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಸ್ವಲ್ಪ ಸಮಯಾವಕಾಶ ನೀಡುವಂತೆ ತಿಳಿಸಿದ್ದಾರೆ.
ರಾಜ್ಯ ಬಿಜೆಪಿಗೆ 'ಸ್ಟಾರ್' ಬಲ: 'ರಾಜ್ಯಸಭಾ ಅಖಾಡ'ಕ್ಕಿಳಿಯಲಿದ್ದರಾ ತಲೈವಾ..!?
ಅಲ್ಲದೆ, ಡಿಸಿಎಂ ಲಕ್ಷ್ಮಣ ಸವದಿ ಅವರು ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ. ಟ್ವೀಟ್ ನಲ್ಲಿ ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಸೇರಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವಂತಾಗಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಲಾಯಿತು.
ರಾಜ್ಯ ಸರ್ಕಾರದಿಂದ 'ಸಾರಿಗೆ ನೌಕರ'ರಿಗೆ ಗುಡ್ ನ್ಯೂಸ್..!
ಈ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗುವಂತಾಗಿ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಡಲಾಯಿತು.
ಮಸ್ಕಿ ಮತ್ತು ಬಸವಕಲ್ಯಾಣ ಉಪಚುನಾವಣೆ ಗೆಲ್ಲಲು ಸಿಎಂ ಬಿಎಸ್ ವೈ ರಣತಂತ್ರ..!
ಮರಾಠ ಸಮುದಾಯದವರಿಗೆ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ವಾಗತ: ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ, ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರಿದ್ದಾರೆ ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತವಾಗಿದೆ.
ಮಹಿಳೆಯರಿಗೆ 'ಗುಡ್ ನ್ಯೂಸ್': ₹ 3 ಲಕ್ಷ ಸಾಲ ಸೌಲಭ್ಯ- ಇಂದೇ ಅರ್ಜಿ ಹಾಕಿ
ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕೈಗೊಂಡ ನಿರ್ಧಾರವನ್ನು ಸ್ವಾಗತಿಸಿದ ಅವರು ಮರಾಠ ಎಂದಾಕ್ಷಣ ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿಯ ವಿಷಯವಾಗಿರುವುದರಿಂದ ಮತ್ತು ಈ ನಿಗಮವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯಂತ ಸಮರ್ಪಕವಾಗಿದೆ.
ರಾಜ್ಯದಲ್ಲಿ ಮತ್ತೆ 3 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ...!
ಈ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಬೇಕು ಎಂಬುದು ಹಲವು ವರ್ಷಗಳಿಂದ ಸರ್ಕಾರಕ್ಕೆ ಸಲ್ಲಿಸುತ್ತಿರುವ ಬೇಡಿಕೆ. ಈ ನಿಟ್ಟಿನಲ್ಲಿ ಈಗ ಮತ್ತೆ ಮುಖ್ಯಮಂತ್ರಿಗಳಿಗೆ ನಾವು ಮನವಿ ಮಾಡಿದ್ದು, ಅವರು ಸಮಯಾವಕಾಶ ನೀಡುವಂತೆ ಕೇಳಿದ್ದಾರೆ. ಕೆಲದಿನಗಳಲ್ಲೇ ಈ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಸಚಿವ ಸ್ಥಾನನಕ್ಕಾಗಿ ಪಟ್ಟು- ರೆಬಲ್ ಆದ ಜಾರಕಿಹೊಳಿ ಅಂಡ್ ಟೀಮ್!
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು, ಲಿಂಗಾಯತ ಸಮುದಾಯ ಸೇರಿದಂತೆ ಹಲವು ಸಂಘಟನೆಗಳು ಸರ್ಕಾರದ ಕ್ರಮವನ್ನು ವಿರೋಧಿಸಿದ್ದು, ಪ್ರತಿಭಟನೆಗೆ ಮುಂದಾಗಿವೆ. ಅಲ್ಲದೇ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸಿಎಂ ಗೆ ಪತ್ರ ಬರೆದು ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಘೋಷಿಸುವಂತೆ ಆಗ್ರಹಿಸಿದ್ದಾರೆ.