ಭೋಪಾಲ್: ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿ ಇದೆ. ಆಗ್ನೇಯ ಮಧ್ಯ ರೈಲ್ವೆ (ರಾಯ್ಪುರ) ಅನೇಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1 ಡಿಸೆಂಬರ್ 2020. ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ.
ಅಧಿಕೃತ ವೆಬ್ಸೈಟ್ secr.indianrailways.gov.in ನಲ್ಲಿ ಬಿಡುಗಡೆಯಾದ ಅಧಿಸೂಚನೆಯ ಪ್ರಕಾರ ಟ್ರೇಡ್ ಅಪ್ರೆಂಟಿಸ್ನ 413 ಹುದ್ದೆಗಳಿಗೆ (Job) ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪೂರ್ಣವಾಗಿ ಓದಲು ಸೂಚಿಸಲಾಗುತ್ತದೆ, ಇದರಿಂದ ಯಾವುದೇ ತಪ್ಪಿಲ್ಲದೆ ಅಭ್ಯರ್ಥಿಗಳು ಫಾರ್ಮ್ನ್ನು ಭರ್ತಿ ಮಾಡಬಹುದು.
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ 10 ಅಥವಾ ಐಟಿಐ (ITI) ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ.
ಇನ್ನು ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಯಲ್ಲಿ ಮಾತ್ರ ಸಿಗಲಿದೆ ಚಹಾ
ವಯಸ್ಸಿನ ಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 15 ವರ್ಷಗಳು ಮತ್ತು ಗರಿಷ್ಠ ವಯಸ್ಸು 24 ವರ್ಷಗಳು ಆಗಿರಬೇಕು. ಇದಕ್ಕಿಂತ ಅಧಿಕ ವಯಸ್ಸಿನ ಅಭ್ಯರ್ಥಿಗಳು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಆಗ್ನೇಯ ಮಧ್ಯ ರೈಲ್ವೆ (Raipur) ನ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿಗೆ ಲಿಂಕ್ ಅನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ.
ಡಿಸೆಂಬರ್ 1 ರಿಂದ ಬದಲಾಗಲಿವೆ ಹಲವು ನಿಯಮಗಳು, ಇವುಗಳನ್ನು ನೆನಪಿನಲ್ಲಿಡಿ
ಆಯ್ಕೆ ಪ್ರಕ್ರಿಯೆ:
ಆಗ್ನೇಯ ಮಧ್ಯ ರೈಲ್ವೆ (ರಾಯ್ಪುರ) ನ ವಿವಿಧ ಹುದ್ದೆಗಳಲ್ಲಿ ಅರ್ಹತಾ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು.