ಕ್ಷೇತ್ರ ಅಧಿಕಾರಿ ಹುದ್ದೆಗಳಿಗೆ BECIL ನೇಮಕಾತಿ

ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಡಿಸೆಂಬರ್ 2020. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ದಿನಾಂಕದ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಏಕೆಂದರೆ 11 ನೇ ತಾರೀಕಿನ ನಂತರ ಯಾವುದೇ ಅಭ್ಯರ್ಥಿಯ ಫಾರ್ಮ್ ಅನ್ನು ಸ್ವೀಕರಿಸಲಾಗುವುದಿಲ್ಲ.

Last Updated : Dec 2, 2020, 03:38 PM IST
  • ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ BECIL ನೇಮಕಾತಿ ಮಾಡಿಕೊಳ್ಳುತ್ತಿದೆ.
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಡಿಸೆಂಬರ್ 2020.
ಕ್ಷೇತ್ರ ಅಧಿಕಾರಿ ಹುದ್ದೆಗಳಿಗೆ BECIL ನೇಮಕಾತಿ title=

ಭೋಪಾಲ್: ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನೇಮಕಾತಿ ಮಾಡಿಕೊಳ್ಳುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯ ಸಂಪೂರ್ಣ ಪ್ರಕ್ರಿಯೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://www.becil.com/ ನಲ್ಲಿ ನೀಡಲಾಗಿದೆ.

ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ (Job) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಡಿಸೆಂಬರ್ 2020. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ದಿನಾಂಕದ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಏಕೆಂದರೆ 11 ನೇ ತಾರೀಕಿನ ನಂತರ ಯಾವುದೇ ಅಭ್ಯರ್ಥಿಯ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

JOB: AAI ನಲ್ಲಿ 368 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿ.15 ಕೊನೆ ದಿನ

ಕ್ಷೇತ್ರ ತಾಂತ್ರಿಕ ಅಧಿಕಾರಿಗಳ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳ ನೇಮಕಾತಿಯನ್ನು ಆಂಧ್ರಪ್ರದೇಶದಲ್ಲಿ ಗುತ್ತಿಗೆ ಆಧಾರದ ಮೇಲೆ ಮಾಡಲಾಗುವುದು. ಒಟ್ಟು 8 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪರಿಶೀಲಿಸಬಹುದು.

ವಯಸ್ಸಿನ ಮಿತಿ: 
ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 35 ವರ್ಷಕ್ಕಿಂತ ಹೆಚ್ಚಿರಬಾರದು. ಆದರೆ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ವಿಶ್ರಾಂತಿ ನೀಡಲಾಗುವುದು.

10ನೇ ತರಗತಿ ಪಾಸ್ ಆದವರಿಗೆ ಭಾರತೀಯ ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವ ವಿಧಾನ: 
ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಧಿಕೃತ ವೆಬ್‌ಸೈಟ್‌ಗೆ ಹೋದ ನಂತರ ಕೊಟ್ಟಿರುವ ಲಿಂಕ್‌ನಿಂದ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಅದನ್ನು ಭರ್ತಿ ಮಾಡಿ ಸಲ್ಲಿಸಿ. 

Trending News