ಬೆಂಗಳೂರು: ಭಾರತ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ವಯೋಮಿತಿ 18 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಪುರುಷ, ಮಹಿಳೆಯರು, ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ ಕೇಂದ್ರ ಸರ್ಕಾರ ಪುರಸ್ಕøತ ಸಂಕಲ್ಪ ಯೋಜನೆಯಡಿ ಇನ್ಕುಬೇಶನ್ ಪ್ರೋಗ್ರಾಂ (Incubation Programme) ಮೂಲಕ ಹೊಸ ಉದ್ಯಮ ಸ್ಥಾಪಿಸುವವರಿಗೆ ಕಲಬುರಗಿಯಲ್ಲ್ಲಿ ಉಚಿತವಾಗಿ 6 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್ ಅವರು ತಿಳಿಸಿದ್ದಾರೆ.
ತರಬೇತಿ ಪಡೆದು ಸ್ವಯಂ ಉದ್ಯೋಗ ಪ್ರಾರಂಭಿಸಲಿಚ್ಛಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ 45 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಪುರುಷ ಮತ್ತು ಮಹಿಳೆಯರುಗಳು ಹಾಗೂ ಎಲ್ಲಾ ವರ್ಗದ ಮಹಿಳೆಯರು ಕನಿಷ್ಠ ಓದು-ಬರಹ ಬಲ್ಲವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು 2020ರ ಡಿಸೆಂಬರ್ 8 ರೊಳಗಾಗಿ ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102 ವಿಳಾಸಕ್ಕೆ ಸಲ್ಲಿಸಬೇಕು ಅಥವಾ 9108972833, 9916006910 ಹಾಗೂ 9986332736 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.