ರಾಜ್ಯಾದ್ಯಂತ ನಾಳೆ ಖಾಸಗಿ ಆಸ್ಪತ್ರೆಗಳ 'OPD' ಬಂದ್..!

ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ- ರಾಜ್ಯಾದ್ಯಂತ ನಾಳೆ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್

Last Updated : Dec 10, 2020, 11:40 AM IST
  • ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ- ರಾಜ್ಯಾದ್ಯಂತ ನಾಳೆ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್
  • ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮ ಅಧಿಸೂಚನೆ ವಿರೋಧಿಸಿ ಪ್ರತಿಭಟನೆ
  • ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಓಪಿಡಿ ಸೇವೆ ಲಭ್ಯವಿರುವುದಿಲ್ಲ. ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಲು ಖಾಸಗಿ ಆಸ್ಪತ್ರೆಗಳು ಆಗ್ರಹ
ರಾಜ್ಯಾದ್ಯಂತ ನಾಳೆ ಖಾಸಗಿ ಆಸ್ಪತ್ರೆಗಳ 'OPD' ಬಂದ್..! title=

ಬೆಂಗಳೂರು: ರಾಜ್ಯಾದ್ಯಂತ ನಾಳೆ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್ ಮಾಡಿ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ.

'ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆಡೆ ಸೆಳೆಯಲು ಗೋಹತ್ಯೆ ನಿಷೇಧ ಕಾಯ್ದೆ ತರುತ್ತಿದೆ'

ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮ ಅಧಿಸೂಚನೆ ವಿರೋಧಿಸಿ ಪ್ರತಿಭಟನೆ ನಡೆಸಲು ಖಾಸಗಿ ಆಸ್ಪತ್ರೆಗಳು ನಿರ್ಧರಿಸಿದ್ದು, ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಓಪಿಡಿ(OPD) ಸೇವೆ ಲಭ್ಯವಿರುವುದಿಲ್ಲ. ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಲು ಖಾಸಗಿ ಆಸ್ಪತ್ರೆಗಳು ಆಗ್ರಹಿಸಿ, ನಾಳೆ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿವೆ. ಹೀಗಾಗಿ ಬೆಂಗಳೂರಿನಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಓಪಿಡಿ ಸೇವೆ ಬಂದ್ ಇರುತ್ತದೆ.

ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ 'ಒನ್ ನೇಶನ್ ಒನ್ ರೇಷನ್ ಕಾರ್ಡ್' ಜಾರಿ!

 

Trending News