ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸರ್ಕಾರವು ಸ್ಪಂಧಿಸದಿರುವ ಹಿನ್ನಲೆಯಲ್ಲಿ ಬೇಸತ್ತು ಸಿಖ್ ಧರ್ಮ ಗುರು ಆತ್ಮಹತ್ಯೆಗೆ ಶರಣಾಗಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಮೋದಿ ಸರ್ಕಾರವು ತನ್ನ ಕ್ರೌರ್ಯದ ಎಲ್ಲ ಮೀತಿಗಳನ್ನು ಮೀರಿದೆ ಎಂದು ಟ್ವೀಟ್ ಮಾಡಿದ್ದಾರೆ.
करनाल के संत बाबा राम सिंह जी ने कुंडली बॉर्डर पर किसानों की दुर्दशा देखकर आत्महत्या कर ली। इस दुख की घड़ी में मेरी संवेदनाएँ और श्रद्धांजलि।
कई किसान अपने जीवन की आहुति दे चुके हैं। मोदी सरकार की क्रूरता हर हद पार कर चुकी है।
ज़िद छोड़ो और तुरंत कृषि विरोधी क़ानून वापस लो! pic.twitter.com/rolS2DWNr1
— Rahul Gandhi (@RahulGandhi) December 16, 2020
ದೆಹಲಿ ಗಡಿಯಲ್ಲಿ ಸಿಖ್ ಧರ್ಮ ಗುರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ಸಂಸದ ರಾಹುಲ್ ಗಾಂಧಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರತಿಭಟಿಸಿದ ರೈತರ ಬೇಡಿಕೆಯನ್ನು ಅಂಗೀಕರಿಸದ ಕಾರಣ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಸರ್ಕಾರ ಕ್ರೌರ್ಯದ ಎಲ್ಲ ಮಿತಿಗಳನ್ನು ದಾಟಿದೆ ಮತ್ತು ಅದು ತಕ್ಷಣ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.
ರೈತರ ಸಮಸ್ಯೆಗೆ ಕೇಂದ್ರ ಸ್ಪಂದಿಸದಿರುವುದಕ್ಕೆ ಬೇಸತ್ತು ಸಿಖ್ ಧರ್ಮಗುರು ಆತ್ಮಹತ್ಯೆ
'ಕರ್ನಲ್ ಮೂಲದ ಸಂತ ಬಾಬಾ ರಾಮ್ ಸಿಂಗ್ ಅವರು ಕುಂಡ್ಲಿ ಗಡಿಯಲ್ಲಿ ರೈತರ ಸ್ಥಿತಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡರು. ದುಃಖದ ಈ ಕ್ಷಣದಲ್ಲಿ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ...ಅನೇಕ ರೈತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ.ಮೋದಿ ಸರ್ಕಾರ ಕ್ರೌರ್ಯದ ಎಲ್ಲ ಮಿತಿಗಳನ್ನು ದಾಟಿದೆ. ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳಿ ”ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.