ನವದೆಹಲಿ: ಪಕ್ಷದ ಹಿರಿಯ ಭಿನ್ನಮತೀಯ ನಾಯಕರೊಂದಿಗೆ ಸುಧೀರ್ಘವಾಗಿ ಚರ್ಚಿಸಿದ ನಂತರ ಈಗ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಲಂಗಾಣ, ಗುಜರಾತ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ಪಕ್ಷದ ಸಂಘಟನೆಯಲ್ಲಿನ ನಾಯಕತ್ವ ಬದಲಿಸಲು ತೀರ್ಮಾನಿಸಿದೆ.
ಇದುವರೆಗೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಜವಾಬ್ದಾರಿಯನ್ನು ರಾಜೀನಾಮೆ ನೀಡಿದ್ದಾರೆ. ಗುಜರಾತ್ನಲ್ಲಿ ಪಕ್ಷದ ಕಳಪೆ ಸಾಧನೆಯ ನಂತರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚಾವ್ಡಾ ಕೂಡ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಇಚ್ಚಿಸಿದಂತೆ ಕಾರ್ಯ ನಿರ್ವಹಿಸಲು ಸಿದ್ಧ- ರಾಹುಲ್ ಗಾಂಧಿ
ಮಧ್ಯಪ್ರದೇಶದ ಪಕ್ಷದ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸಿಎಲ್ಪಿ ನಾಯಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಜಿ -23 ರೊಂದಿಗೆ ಉನ್ನತ ನಾಯಕತ್ವದ ಸಭೆಯನ್ನು ತರುವಲ್ಲಿ ಕಮಲ್ ನಾಥ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗಿದೆ.ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷವು ಬದಲಾವಣೆಗಳನ್ನು ಮಾಡಿತ್ತು. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಬಾಲಾಸಾಹೇಬ್ ಥೋರತ್ ಅವರು ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ.
ಶೀಘ್ರದಲ್ಲೇ ಕಾಂಗ್ರೆಸ್ ಖಾಯಂ ಅಧ್ಯಕ್ಷರ ಆಯ್ಕೆ..!? ಯಾರಿಗೆ ಸಿಗಲಿದೆ ಕೈ ಸಾರಥ್ಯ?
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಅಸ್ಸಾಂ ಮತ್ತು ಕೇರಳಕ್ಕೆ ತಲಾ ಮೂರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿಗಳನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ.ಹೊಸದಾಗಿ ನೇಮಕಗೊಂಡ ಕಾರ್ಯದರ್ಶಿಗಳು ಎರಡು ರಾಜ್ಯಗಳ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಿಗೆ ಸಹಾಯ ಮಾಡಲಿದ್ದಾರೆ - ಜಿತೇಂದ್ರ ಸಿಂಗ್ ಅಸ್ಸಾಂ ಉಸ್ತುವಾರಿ ವಹಿಸಿಕೊಂಡಿದ್ದರೆ ಮತ್ತು ತಾರಿಕ್ ಅನ್ವರ್ ಕೇರಳದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
'99.9% ಕಾಂಗ್ರೆಸ್ ಸದಸ್ಯರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಕಾಣಲು ಬಯಸುತ್ತಾರೆ'
ಮುಂದಿನ 10 ದಿನಗಳಲ್ಲಿ ನಡೆಯಲಿರುವ ಸರಣಿ ಸಭೆಗಳಲ್ಲಿ ಮೊದಲನೆಯದಾಗಿ ನಿನ್ನೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಭಿನ್ನಮತೀಯರನ್ನು ಭೇಟಿಯಾದರು. ನಾಯಕತ್ವದ ವಿಷಯದ ಬಗ್ಗೆ ತಿಂಗಳುಗಳ ಕಾಲ ಆಂತರಿಕ ದ್ವೇಷದ ನಂತರ ಸಭೆ ಸಾಮರಸ್ಯದ ಮೊದಲ ಹೆಜ್ಜೆಯಾಗಿತ್ತು.
ಕಾಂಗ್ರೆಸ್ 'ಬಂಡಾಯ ಬಣ'ದ ಭೇಟಿಗೆ ಒಪ್ಪಿದ ಸೋನಿಯಾ ಗಾಂಧಿ
ಸಾಂಸ್ಥಿಕ ಚುನಾವಣೆಗಳನ್ನು ನಡೆಸಲು ಉನ್ನತ ನಾಯಕತ್ವ ಒಪ್ಪಿಗೆ ನೀಡಿದೆ, ಇನ್ನೊಂದೆಡೆಗೆ ಈ ವಿಚಾರವಾಗಿ ಕಾರ್ಯಕಾರಿ ಸಮಿತಿಯು ಅಂತಿಮ ಕರೆ ನಿರ್ಣಯವನ್ನು ತೆಗೆದುಕೊಳ್ಳುತ್ತದೆ.ರಾಹುಲ್ ಗಾಂಧಿ ಅವರು ಸಭೆಯಲ್ಲಿ ಪಕ್ಷದ ಇಚ್ಚೆಗನುಸಾರವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿರುವ ಹೇಳಿಕೆಯು ಅವರು ಮತ್ತೆ ಕಾಂಗ್ರೆಸ್ ಪಕ್ಷದ ಸಾರಥ್ಯವನ್ನು ವಹಿಸಲಿದ್ದಾರೆ ಎನ್ನುವ ಸೂಚನೆಯನ್ನು ನೀಡುತ್ತದೆ.
ಇನ್ನೊಂದೆಡೆಗೆ ಕಾಂಗ್ರೆಸ್ ಪಕ್ಷದ ವಕ್ತಾರ ರಂದೀಪ್ ಸುರ್ಜೆವಾಲಾ ಅವರು ಪಕ್ಷದ ಶೇ 99.99 ನಾಯಕರು ರಾಹುಲ್ ಗಾಂಧಿ ಅವರನ್ನು ಪಕ್ಷದ ನಾಯಕರನ್ನಾಗಿ ನೋಡಲು ಬಯಸಿದ್ದಾರೆ ಎಂದು ಹೇಳಿರುವುದು ಇದಕ್ಕೆ ಮತ್ತಷ್ಟು ಪುಷ್ಟಿಕರಿಸುತ್ತದೆ.