ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ: ಸಚಿವ ಎಸ್.ಟಿ. ಸೋಮಶೇಖರ್

ಸ್ವಾಮೀಜಿ ಬೆಂಗಳೂರಿನ ಸ್ಲಂಗಳಲ್ಲಿರುವ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

Written by - Yashaswini V | Last Updated : Dec 23, 2020, 11:55 AM IST
  • ಬೆಂಗಳೂರಿನ ಸ್ಲಂ ಮಕ್ಕಳಿಗೆ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ ನಿರ್ಮಲಾನಂದನಾಥ ಸ್ವಾಮೀಜಿ
  • ಸರ್ಕಾರದ ಜಾಗ ನೀಡಿದರೆ ಆದಿಚುಂಚನಗಿರಿ ಶ್ರೀಮಠದಿಂದ ಸ್ಲಂ ಮಕ್ಕಳಿಗೆ ಶಿಕ್ಷಣ
  • ಸ್ವಾಮೀಜಿಗಳ ಪ್ರಸ್ತಾಪವನ್ನು ಪರಿಶೀಲಿಸುವ ಭರವಸೆ ನೀಡಿದ ಸೋಮಶೇಖರ್
ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ: ಸಚಿವ ಎಸ್.ಟಿ. ಸೋಮಶೇಖರ್ title=
Free education for slum children

ಬೆಂಗಳೂರು: ಬೆಂಗಳೂರಿನ ಸ್ಲಂಗಳಲ್ಲಿರುವ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ಸಿಗಬೇಕಿದೆ. ಸರ್ಕಾರದ  ಜಾಗ ನೀಡಿದರೆ ಆದಿಚುಂಚನಗಿರಿ ಶ್ರೀಮಠದಿಂದ ಈ ಕೆಲಸ ಮಾಡಲಾಗುವುದೆಂದು ಆದಿಚುಂಚನಗಿರಿ ಮಠದ  ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekhar) ತಿಳಿಸಿದರು.

ವಿಜಯನಗರದ ಆದಿಚುಂಚನಗಿರಿ ಶ್ರೀಮಠಕ್ಕೆ ಭೇಟಿ ನೀಡಿ, ಡಾ. ನಿರ್ಮಲಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸ್ವಾಮೀಜಿ ಬೆಂಗಳೂರಿನ ಸ್ಲಂಗಳಲ್ಲಿರುವ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ (Free Education) ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಲಾಗುವುದು ಎಂದರು.

ಕೊರೋನಾ ಎರಡನೇ ಅಲೆ ಬಗ್ಗೆ ಭಯ ಪಡಬೇಕಾದ ಅಗತ್ಯವಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಸ್ಯಾನಿಟೈಸ್ ಬಳಕೆಮಾಡಬೇಕು. ಜೊತೆಗೆ ಕೇಂದ್ರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನು ನಾಲ್ಕೈದು ತಿಂಗಳು ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು ಎಂದು ಸಚಿವರು ಕರೆ ನೀಡಿದರು. 

ಇದನ್ನೂ ಓದಿ: ಜೇನುತುಪ್ಪಕ್ಕೆ ಆಯುರ್ವೇದ ಔಷಧ ಶಕ್ತಿ ಇದೆ; ಕೇಂದ್ರ ಸಚಿವ ಡಿ.ವಿ.‌ ಸದಾನಂದಗೌಡ

25 ರಂದು ರೈತ ದಿನಾಚರಣೆ:
ಡಿಸೆಂಬರ್ 25ರಂದು ಮಾಜಿ ಪ್ರಧಾಬಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬ. ಅಂದು ರೈತರ (Farmers) ದಿನವನ್ನಾಗಿ ನಾವು ಆಚರಿಸುತ್ತಿದ್ದೇವೆ. ಅಂದು 30 ಜಿಲ್ಲೆಗಳಲ್ಲೂ ಸುದ್ದಿಗೋಷ್ಠಿ ನಡೆಸಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಏನೆಲ್ಲ ಉಪಯೋಗವಾಗಲಿದೆ ಎಂಬ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು. ಇದು ಹೇಗೆ ರೈತರಿಗೆ ಉಪಕಾರಿ ಎನ್ನುವುದನ್ನು ಮನದಟ್ಟು ಮಾಡಲಾಗುವುದು ಎಂದು ತಿಳಿಸಿದರು.

ಎಪಿಎಂಸಿ ಮುಚ್ಚಲ್ಲ :
ಎಪಿಎಂಸಿ (APMC) ಮುಚ್ಚುವ ಪ್ರಶ್ನೆಯೇ ಇಲ್ಲ. ಯಾರಿಗೂ ಅದರಿಂದ ತೊಂದರೆಯಾಗದು. ಎಪಿಎಂಸಿಯನ್ನು ಇನ್ನೂ ಮೇಲ್ದರ್ಜೆಗೇರಿಸುವ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ. ಇದಕ್ಕಾಗಿ ನಬಾರ್ಡ್ (NABARD) ನಿಂದ ಸಹ 205 ಕೋಟಿ ರೂಪಾಯಿ ಅನುದಾನ ನೀಡಿದೆ. ಅಲ್ಲದೆ, 35 ಪೈಸೆಗೆ ಇಳಿಸಿದ್ದ ಸೆಸ್ ಅನ್ನು ವರ್ತಕರು ಹಾಗೂ ಪ್ರತಿಪಕ್ಷಗಳ ಆಗ್ರಹದ ಮೇರೆಗೆ 1 ರೂಪಾಯಿಗೆ ಏರಿಸಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ಆದಾಯದಲ್ಲಿ ನಷ್ಟ ಎಂಬ ಮಾತೂ ಇನ್ನು ಬಾರದು ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಇದನ್ನೂ ಓದಿ: ನಮ್ಮ ಸರ್ಕಾರ ರೈತರ ಪರವಾಗಿದೆ: ಸಚಿವ ಎಸ್.ಟಿ. ಸೋಮಶೇಖರ್

ಪ್ರಕರಣ ಕೋರ್ಟ್ ನಲ್ಲಿದೆ:
ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಸಂಬಂಧಿಸಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಾಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೋನಾ ನಿಯಂತ್ರಣದಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ. ವರ್ಗಾವಣೆ ಪ್ರಕರಣ ಕೋರ್ಟ್ ನಲ್ಲಿರುವುದರಿಂದ ಈ ಸಂದರ್ಭದಲ್ಲಿ ನಾನು ಏನನ್ನೂ ಹೇಳಲಾಗದು ಎಂದು ಸಚಿವರು ತಿಳಿಸಿದರು.

ಎಲ್ಲರೂ ಸರ್ಕಾರದ ಆದೇಶ ಪಾಲಿಸಬೇಕು :
ಸಚಿವರ ಮಾತುಗಳನ್ನು ಜಿಲ್ಲಾಧಿಕಾರಿಗಳು ಕೇಳುತ್ತಿಲ್ಲ ಎಂಬ ಆರೋಪಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲ್ಲಿ ಸೋಮಶೇಖರ್ ಹೇಳುತ್ತಿದ್ದಾರೆ ಅಥವಾ ಇನ್ನಾವುದೇ ಸಚಿವರು ಹೇಳುತ್ತಿದ್ದಾರೆಂದರೆ ಅದು ವೈಯುಕ್ತಿಕ ಹೇಳಿಕೆಯಲ್ಲ. ಸರ್ಕಾರದ ಆದೇಶ. ಅದನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News