Anti Cow Slaughter Bill : ಗೋಹತ್ಯೆ ನಿಷೇಧದ ಹಿಂದೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ : ಸಿದ್ದರಾಮಯ್ಯ

ಗೋಹತ್ಯೆ ನಿಷೇಧ ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. 

Written by - Zee Kannada News Desk | Last Updated : Dec 29, 2020, 06:56 PM IST
  • ಗೋಹತ್ಯೆ ನಿಷೇಧ ವಿರೋಧಿಸಿ ಸಿದ್ದರಾಮಯ್ಯ ಸರಣಿ ಟ್ವೀಟ್
  • ಗೋಹತ್ಯೆ ನಿಷೇಧ ಮಾಡಿ ಗೋಮಾಂಸವನ್ನು ಆಮದು ಮಾಡಿಕೊಳ್ಳುತ್ತೀರಾ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ
  • ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ : ಸಿದ್ದರಾಮಯ್ಯ
Anti Cow Slaughter Bill : ಗೋಹತ್ಯೆ ನಿಷೇಧದ ಹಿಂದೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ : ಸಿದ್ದರಾಮಯ್ಯ   title=
ಗೋಹತ್ಯೆ ನಿಷೇಧ ವಿರೋಧಿಸಿ ಸಿದ್ದರಾಮಯ್ಯ ಸರಣಿ ಟ್ವೀಟ್ (file photoe)

ಬೆಂಗಳೂರು : ಗೋಹತ್ಯೆ ನಿಷೇಧ ಕಾಯ್ದೆಯನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಜಾರಿಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದರ ವಿರುದ್ಧವೂ ಗುಡುಗಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸರರ್ಕಾರ ಗೋಹತ್ಯೆ ನಿಷೇಧ (Anti Cow Slaughter Bill) ಮಾಡಿ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲ ಎಂದಿರುವ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ?  ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (B S Yadiyurappa) ಅವರನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ಳುತ್ತೀರಾ ಎಂದು ಕೇಳಿದ್ದಾರೆ.

ALSO READ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ಸುಗ್ರೀವಾಜ್ಞೆ ; ಸಂಪುಟದ ಮಹತ್ವದ ತೀರ್ಮಾನ

ಅಲ್ಲದೆ, ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು (Farmers) ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ALSO READ : ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದೀರಾ : ಸಿಟಿ ರವಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ಅಲ್ಲದೆ, ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು  ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ (BJP) ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಸವಾಲು ಹಾಕಿದ್ದಾರೆ.

ಇನ್ನು ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂಬ ಹೇಳಿಕೆಯನ್ನೂ ಸಿದ್ದರಾಮಯ್ಯ (Siddaramaiah)ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ ಎಂದು  ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G

iOS Link - https://apple.co/3loQYe
 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News