ಬೆಂಗಳೂರು: 'ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಕೊರೋನಾ ಸಮಯದಲ್ಲಿ ಸರ್ಕಾರವೇ ಲಾಕ್ ಡೌನ್, ಸೀಲ್ ಡೌನ್ ಮಾಡಿ ಈಗ ಜನ ಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕೊರೋನಾ ಮತ್ತು ಆರ್ಥಿಕ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರಕಾರವು ಜನರ ಮೇಲೆ ನಾನಾ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(D.K.Shivakumar) ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೋಮವಾರ ಪ್ರತಿಭಟನೆ ನಡೆಸಿತು.
Nikhil Kumaraswamy: 'ಇಲ್ಲಿಯವರೆಗೆ ಒಂದು ರಾಜಕಾರಣ ಇನ್ಮುಂದೆ ನಿಜವಾದ ರಾಜಕಾರಣ ಆರಂಭ'
ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, 'ಈ ವರ್ಷವನ್ನು ಎಲ್ಲ ಕ್ಷೇತ್ರಗಳ ಸ್ಥಳೀಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಹಾಗೂ ಸಂಘಟನೆ ವರ್ಷವಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ರಾಜ್ಯದ ಸಮಸ್ಯೆ ಬೇರೆ. ಸ್ಥಳೀಯ ಸಮಸ್ಯೆಗಳೇ ಬೇರೆ ಎಂದರು.
Laxman Savadi: ‘ಬಲಗೈ ಉಂಗುರ ರಹಸ್ಯ’ ಶ್ರೀರಾಮುಲುಗೆ ಲಕ್ಷ್ಮಣ ಸವದಿ ಏನು ಮಾಡಿದ್ರು ಗೊತ್ತಾ?
ಕೊರೋನಾದಿಂದಾಗಿ ಜನ ತತ್ತರಿಸಿದ್ದಾರೆ. ವ್ಯಾಪಾರ ವಹಿವಾಟು ಇಲ್ಲ. ಆದರೂ ಪಾಲಿಕೆ ಹೆಚ್ಚಿನ ತೆರೆಗೆ ಹಾಕಿದೆ. ನಾವು ತೆರಿಗೆ ಮನ್ನಾ ಮಾಡಿ ಎಂದು ಆಗ್ರಹಿಸಿದರೆ, ಇವರು ಹೆಚ್ಚು ಮಾಡುತ್ತಿದ್ದಾರೆ. ಹೈದರಾಬಾದ್ ನಲ್ಲಿ ಶೇ.50ರಷ್ಟು ಕಡಿಮೆ ಮಾಡಿದ್ದು, ನಾವು ಇಲ್ಲಿ ಪೂರ್ಣ ಪ್ರಮಾಣದಲ್ಲಿ ಎಂದು ಹೇಳಿದ್ದೆವು. ಲಾಕ್ ಡೌನ್, ಸೀಲ್ ಡೌನ್ ಎಲ್ಲವನ್ನು ಮಾಡಿದ್ದು ಸರ್ಕಾರವೇ. ಇಲ್ಲಿ ಜನರ ತಪ್ಪಿಲ್ಲ. ಯಾರಿಗೂ ವ್ಯಾಪಾರ ಇಲ್ಲದೆ ಆದಾಯವಿಲ್ಲ. ಈ ಸಮಯದಲ್ಲಿ ತೆರಿಗೆ ಹೆಚ್ಚಿಸಿದ್ದಾರೆ ಎಂದರು.
B.S.Yediyurappa,: ಸಿಎಂ ಬಿಎಸ್ ವೈಗೆ ಶಾಸಕರ ದೂರು..! ಯಾರ ಮೇಲೆ? ಯಾಕೆ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.