ಬೆಂಗಳೂರು: ರಾಜ್ಯ ಸರ್ಕಾರವು ಏಪ್ರಿಲ್ 21 ನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದು, ಶೀಘ್ರವೇ ಈ ಸಂಬಂಧ ಆದೇಶ ಹೊರಬೀಳಲಿದೆ.
ರಾಜ್ಯದಲ್ಲಿ ಏಪ್ರಿಲ್ 21 ಅನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರಿ ನೌಕರ(State Government)ರ ಬಹುದಿನಗಳ ಬೇಡಿಕೆಗೆ ಸರ್ಕಾರ ಒಪ್ಪಿದ್ದು, ಎರಡು ದಿನಗಳಲ್ಲಿ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆ ಇದೆ.
Amit Shah: ಸಿಎಂ ಯಡಿಯೂರಪ್ಪಗೆ 'ಗುಡ್ ನ್ಯೂಸ್' ನೀಡಿದ ಅಮಿತ್ ಶಾ!
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ರಾಜ್ಯ ಸರ್ಕಾರಿ ನೌಕರರಿಗೂ ಒಂದು ದಿನ ಇರಲಿ ಎಂಬ ಬೇಡಿಕೆಗೆ ಸರ್ಕಾರ ಸಮ್ಮತಿಸಿದ್ದು, ಎರಡು ದಿನಗಳಲ್ಲೇ ಆದೇಶ ಹೊರಬೀಳಲಿದ್ದು, ಈ ವರ್ಷದಿಂದಲೇ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕಾಣದ ಕನ್ನಡ : HD Kumarswamy ಕಿಡಿ
ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ ನಾಗರಿಕ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುವುದು, ಭ್ರಷ್ಟಾಚಾರ ರಹಿತ ಆಡಳಿತ ನಡೆಸುವುದು, ನೌಕರರಲ್ಲಿ ಜಾಗೃತಿ ಮೂಡಿಸುವುದು ಸೇರಿ ವಿವಿಧ ಕಾರ್ಯಕ್ರಮಗಳನ್ನು ನೌಕರರ ದಿನಾಚರಣೆ ಸಂದರ್ಭ ಹಮ್ಮಿಕೊಳ್ಳಲಾಗುತ್ತದೆ.
ಮಹಿಳಾ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.