BIG BOSS: 'ಬಿಗ್ ಬಾಸ್ ಸೀಸನ್ 8'ರ ಮನೆ ಪ್ರವೇಶಿಸುವ ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ ನೋಡಿ..!

ಎಕ್ಸ್ ಕ್ಯೂಸ್ ಮಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಿದ ನಟ ಸುನೀಲ್ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ

Last Updated : Jan 29, 2021, 08:23 PM IST
  • ಕಿಚ್ಚ ಸುದೀಪ್ ನಿರೂಪಣೆಯ ಅತಿ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್' ಸೀಸನ್ 8 ಫೆಬ್ರವರಿಯಿಂದ ಆರಂಭವಾಗಲಿದೆ.
  • ಎಕ್ಸ್ ಕ್ಯೂಸ್ ಮಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಿದ ನಟ ಸುನೀಲ್ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ
  • ಜೊತೆಗೆ ಸಿಲ್ಲಿಲಲ್ಲಿ ಖ್ಯಾತಿಯ ರವಿಶಂಕರ್ ಗೌಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವುದು ಪಕ್ಕಾ
BIG BOSS: 'ಬಿಗ್ ಬಾಸ್ ಸೀಸನ್ 8'ರ ಮನೆ ಪ್ರವೇಶಿಸುವ ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ ನೋಡಿ..! title=

ಬೆಂಗಳೂರು: ಕಿಚ್ಚ ಸುದೀಪ್ ನಿರೂಪಣೆಯ ಅತಿ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್' ಸೀಸನ್ 8 ಫೆಬ್ರವರಿಯಿಂದ ಆರಂಭವಾಗಲಿದೆ. ಯಶಸ್ವಿಯಾಗಿ ಏಳು ಸೀಸನ್ ಗಳನ್ನು ಪೂರೈಸಿರುವ ಬಿಗ್ ಬಾಸ್ ಇದೀಗ ಎಂಟನೇ ಸೀಸನ್ ಅನ್ನು ಶುರು ಮಾಡುತ್ತಿದೆ.‌. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ. ಎಕ್ಸ್ ಕ್ಯೂಸ್ ಮಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡಿದ ನಟ ಸುನೀಲ್ ಈ ಬಾರಿ ಬಿಗ್ ಬಾಸ್(Big Boss) ಮನೆ ಪ್ರವೇಶಿಸಲಿದ್ದಾರೆ. ಜೊತೆಗೆ ಸಿಲ್ಲಿಲಲ್ಲಿ ಖ್ಯಾತಿಯ ರವಿಶಂಕರ್ ಗೌಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವುದು ಪಕ್ಕಾ ಆಗಿದೆ.

Rocking Star Yash ಅಭಿಮಾನಿಗಳಿಗೆ ಗುಡ್ ನ್ಯೂಸ್, ಜುಲೈ 16ರಂದು ತೆರೆಗೆ ಬರಲಿದೆ KGF 2

ಸಾಕಷ್ಟು ಸಿನಿಮಾ, ಧಾರಾವಾಹಿ. ರಿಯಾಲಿಟಿ ಶೋಗಳ ಮೂಲಕ ಗಮನ ಸೆಳೆದ ನಟಿ ವಿನಯ ಪ್ರಸಾದ್ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ. ಸರಿಗಮಪ ಸಿಂಗಿಂಗ್ ಶೋ ಮೂಲಕ ಮನೆ ಮಾತಾದ ಸರಿಗಮಪ ಖ್ಯಾತಿಯ ಹನುಮಂತು, . ಜೊತೆಗೆ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ಈ ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ. ಜನಪ್ರಿಯ ಆರ್ ಜೆ ರಾಜೇಶ್ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ. ತುಂಟಾಟ ಸಿನಿಮಾದ ನಟಿ ರೇಖಾ, ಅಗ್ನಿಸಾಕ್ಷಿ ಧಾರಾವಾಹಿ ನಟಿ ವೈಷ್ಣವಿ ಗೌಡ, ಅವಧೂತ ಗೌರಿಗದ್ದೆ ವಿನಯ್ ಗುರೂಜಿ ಕೂಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ.

ಇಂದಿರಾ ಗಾಂಧಿ ಪಾತ್ರದಲ್ಲಿ ಮಿಂಚಲಿರುವ Kangna Ranaut; ಚಿತ್ರದ ಬಗ್ಗೆ ಕಂಗನಾ ಮಾತು..

ಇನ್ನೂ, ಗಂಡ ಹೆಂಡತಿ ಸಿನಿಮಾ ಖ್ಯಾತಿಯ ನಿರ್ದೇಶಕ ರವಿ ಶ್ರೀವತ್ಸ ಹಲವಾರು ಕಾಂಟ್ರವರ್ಸಿಯಿಂದ ಸುದ್ದಿ ಮಾಡಿದ್ದರು. ಇದೀಗ ನಿರ್ದೇಶಕ ರವಿ ಶ್ರೀವತ್ಸ ಕೂಡ ಬಿಗ್ ಬಾಸ್ ಮನೆ ಸೇರುವ ಮನಸ್ಸು ಮಾಡಿದ್ದಾರಂತೆ. ವಾರ್ತಾ ವಾಚಕ ಟಿವಿ 9 ಅಮರ್ ಪ್ರಸಾದ್, ಜೊತೆ ಜೊತೆಯಲ್ಲಿ ಖ್ಯಾತಿಯ ನಟ ಅನಿರುದ್ದ್ , ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು KGF Chapter 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ನಿನ್ನೆಯಷ್ಟೇ ಕಿಚ್ಚ ಸುದೀಪ್ ಬಿಗ್ ಬಾಸ್ ಫ್ರೋಮೋ ಮೂಲಕ ಸದ್ದು ಮಾಡುತ್ತಿದ್ದಾರೆ. ಪ್ರೋಮೋದಲ್ಲಿ ನಂಬರ್ 8 ರ ಕಾನ್ಸೆಪ್ಟ್ ಇಟ್ಟುಕೊಂಡು ಬಿಗ್ ಬಾಸ್ ಫೆಬ್ರವರಿಯಿಂದ ಶುರುವಾಗ್ತಿದೆ ಎಂಬ ಸಂದೇಶ ನೀಡಿದ್ದಾರೆ ಕಿಚ್ಚ ಸುದೀಪ್.

ಕೊನೆಗೂ ರಿಲೀಸ್ ಆಯ್ತು 'Bigg Boss ಸೀಸನ್-8' ರ ಪ್ರೋಮೋ! ಇಲ್ಲಿದೆ Video

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News