"ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿ"

 ರಾಹುಲ್ ಗಾಂಧಿಯನ್ನು ಪಕ್ಷದ ಮುಖ್ಯಸ್ಥರಾಗಿ ತಕ್ಷಣದಿಂದ ಮರಳಲು ಕಾಂಗ್ರೆಸ್ ದೆಹಲಿ ಘಟಕವು ಭಾನುವಾರ ಸಂಜೆ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದೆ.

Last Updated : Jan 31, 2021, 09:01 PM IST
  • ರಾಹುಲ್ ಗಾಂಧಿಯನ್ನು ಪಕ್ಷದ ಮುಖ್ಯಸ್ಥರಾಗಿ ತಕ್ಷಣದಿಂದ ಮರಳಲು ಕಾಂಗ್ರೆಸ್ ದೆಹಲಿ ಘಟಕವು ಭಾನುವಾರ ಸಂಜೆ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದೆ.
  • ಈಗ ಪಕ್ಷದಲ್ಲಿ ಪೂರ್ಣಾವಧಿಯ ಅಧ್ಯಕ್ಷರ ನೇಮಕಕ್ಕೆ ಒತ್ತಡ ಹೆಚ್ಚಾಗಿರುವುದರಿಂದಾಗಿ ದೆಹಲಿ ಕಾಂಗ್ರೆಸ್ ಘಟಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅಂಗೀಕಾರ ನಿರ್ಣಯವನ್ನು ತೆಗೆದುಕೊಂಡಿದೆ.
"ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿ"  title=

ನವದೆಹಲಿ: ರಾಹುಲ್ ಗಾಂಧಿಯನ್ನು ಪಕ್ಷದ ಮುಖ್ಯಸ್ಥರಾಗಿ ತಕ್ಷಣದಿಂದ ಮರಳಲು ಕಾಂಗ್ರೆಸ್ ದೆಹಲಿ ಘಟಕವು ಭಾನುವಾರ ಸಂಜೆ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದೆ.

'ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಹಲವಾರು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ನಂತರ ಜೂನ್‌ನಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಪಕ್ಷದ ರಾಜ್ಯ ಘಟಕಗಳು ಇದೇ ರೀತಿಯ ನಿರ್ಣಯ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: 'ಬೆತ್ತದಿಂದ ಬಾರಿಸುವ' ರಾಹುಲ್ ಹೇಳಿಕೆಗೆ ಪ್ರಧಾನಿ ನೀಡಿದ ಉತ್ತರವೇನು?

ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಿಡಬ್ಲ್ಯುಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಯ ಕಳೆದ ವಾರ ನಡೆದ ಸಭೆಯ ನಂತರ ಹೊಸ ಮುಖ್ಯಸ್ಥರ ಆಯ್ಕೆ ಘೋಷಿಸಲಾಯಿತು.ಸಭೆಯಲ್ಲಿ ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪಿ.ಚಿದಂಬರಂ.ಪಕ್ಷದ ನಾಯಕತ್ವ ಮತ್ತು ನಿರ್ವಹಣೆಯ ಬಗ್ಗೆ ಅಹಿತಕರ ಪ್ರಶ್ನೆಗಳನ್ನು ಎತ್ತಿದವರು ಸಾಂಸ್ಥಿಕ ಚುನಾವಣೆಗಳನ್ನು ಕೂಡಲೇ ನಡೆಸುವಂತೆ ಕೇಳಿಕೊಂಡರು.

ಇನ್ನೊಂದೆಡೆಗೆ ರಾಹುಲ್ ಗಾಂಧಿ ನಿಷ್ಠಾವಂತರು ಎಂದು ಕರೆಯಲಾಗುವ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್ ಮತ್ತು ಅಮರಿಂದರ್ ಸಿಂಗ್, ಮತ್ತು ಎಕೆ ಆಂಟನಿ, ತಾರಿಕ್ ಅನ್ವರ್ ಮತ್ತು ಉಮ್ಮನ್ ಚಾಂಡಿ ಅವರು ಇದನ್ನು ರಾಜ್ಯ ಚುನಾವಣೆಯ ನಂತರ ನಡೆಸಬೇಕು ಎಂದು ಹೇಳಿದರು.

ಇದನ್ನೂ ಓದಿ: ನಿಮ್ಮ ಕೆಲವು ಮ್ಯಾಜಿಕಲ್ ವ್ಯಾಯಾಮವನ್ನು ಮಾಡಿ, 'Modinomics ಗೆ ರಾಹುಲ್ ಗಾಂಧಿ ವ್ಯಂಗ್ಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಿದ ನಂತರ ರಾಹುಲ್ ಗಾಂಧಿ (rahul gandhi) ಅವರು 2019 ರಲ್ಲಿ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದರು ಮತ್ತು ಹಲವಾರು ಕರೆಗಳನ್ನು ಮಾಡಿದರೂ ಹಿಂದಿರುಗುವುದಿಲ್ಲ ಎಂಬ ನಿರ್ಧಾರದಿಂದ ಹಿಂದೆ ಸರಿದಿಲ್ಲ.ಇದಾದ ನಂತರ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ನೇಮಕವಾದರು.ಇನ್ನೊಂದೆಡೆ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಅವರು ಸಕ್ರೀಯ ರಾಜಕಾರಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಪಕ್ಷದ ಆಂತರಿಕ ವಲಯದಲ್ಲಿನ ಮೂಲಗಳು ತಿಳಿಸಿವೆ.

ಈ ಹಿನ್ನಲೆಯಲ್ಲಿ ಈಗ ಪಕ್ಷದಲ್ಲಿ ಪೂರ್ಣಾವಧಿಯ ಅಧ್ಯಕ್ಷರ ನೇಮಕಕ್ಕೆ ಒತ್ತಡ ಹೆಚ್ಚಾಗಿರುವುದರಿಂದಾಗಿ ದೆಹಲಿ ಕಾಂಗ್ರೆಸ್ ಘಟಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅಂಗೀಕಾರ ನಿರ್ಣಯವನ್ನು ತೆಗೆದುಕೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News