ಬಾಗಲಕೋಟೆ: ‘ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನನಗೆ ಸ್ವಾತಂತ್ರ್ಯವೇ ಇರಲಿಲ್ಲ. ಅದರಲ್ಲಿ ನಾನು ಎಫ್ಡಿಎ ಕ್ಲರ್ಕ್ ಆಗಿದ್ದೆ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಜೊತೆಗಿನ ಮೈತ್ರಿಯೊಂದಿಗಿನ ನೋವನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಜೆಡಿಎಸ್ ಸಂಘಟನಾತ್ಮಕ ಸಮಾವೇಶದಲ್ಲಿ ಮತ್ತು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ವಿಷಯ ಪ್ರಸ್ತಾಪಿಸಿದ ಹೆಚ್.ಡಿ.ಕುಮಾರಸ್ವಾಮಿ(HD Kumaraswamy), ನಾನು ಸಿಎಂ ಆಗಿದ್ದರೂ ಸ್ವತಂತ್ರ ನಿರ್ಣಯ ತೆಗೆದುಕೊಳ್ಳುವ ಹಾಗಿರಲಿಲ್ಲ ಎಂದರು.
ಇಂದು Union Budgetನಲ್ಲಿ ಕರ್ನಾಟಕಕ್ಕೆ ಏನೇನು ಸಿಗಬಹುದು?
ಒಂದು ಕಡೆ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಯೋಜನೆ ಹಾಗೂ ನೀರಾವರಿ ಯೋಜನೆಯನ್ನೇ ಮುಂದುವರಿಸಿ ಎಂದು ಒತ್ತಡ ಹಾಕುತ್ತಿದ್ದರು. ಇನ್ನೊಂದೆಡೆ ಬಿಜೆಪಿಯವರು ರೈತರ ಸಾಲ ಮನ್ನಾ ಅಂತ ಹೇಳಿ ಅಧಿಕಾರಕ್ಕೆ ಬಂದಿದ್ದಿರಿ ಸಾಲಮನ್ನಾ ಮಾಡದೆ ಅವರಿಗೆ ಟೋಪಿ ಹಾಕುತ್ತಿದ್ದೀರಿ ಎಂದು ವ್ಯಂಗ್ಯವಾಗಿ ಮಾತನಾಡುತ್ತಿದ್ದರು. ಹೀಗಾಗಿ ನನ್ನ ಸ್ಥಿತಿ ಕ್ಲರ್ಕ್ನದ್ದಾಗಿತ್ತು ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.
'ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳಿಂದ ದೇಶದ ಭವಿಷ್ಯ ಕರಾಳ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.