ಬೆಂಗಳೂರು: ಎಐಸಿಸಿಯಿಂದ ಮತ್ತೊಮ್ಮೆ ರೈತರ ಪ್ರತಿಭಟನೆಗೆ ಕರೆ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ರೈತರ ಸಮಾವೇಶ ನಡೆಸಲು ಎಐಸಿಸಿ ಸೂಚನೆ ನೀಡಿದೆ. ಫೆಬ್ರವರಿ 6 ರಿಂದ 14 ರ ವರೆಗೆ ರೈತ ಸಮಾವೇಶಗಳನ್ನು ನಡೆಸಬೇಕೆಂದು ತಿಳಿಸಲಾಗಿದೆ.
ಮೂರು ಕೃಷಿ ತಿದ್ದುಪಡಿ ಕಾಯ್ದೆ(Farm Law)ಗಳನ್ನು ಹಿಂಪಡೆಯುವಂತೆ, ರಾಷ್ಟ್ರೀಯ ಭದ್ರತೆ ಉಲ್ಲಂಘನೆಯ ಬಗ್ಗೆ ಜೆಪಿಸಿ ತನಿಖೆಗೆ ಒತ್ತಾಯಿಸಲಾಗುವುದು. ರೈತ ಸಮಾವೇಶದ ವೇಳೆ ಕನಿಷ್ಠ ಎರಡು ಕಿಲೋಮೀಟರ್ ಪಾದಯಾತ್ರೆ ನಡೆಸಬೇಕು. ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ, ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ತಲುಪಿಸಲು ಮನವಿ ಸಲ್ಲಿಸುವಂತೆ ತಿಳಿಸಲಾಗಿದೆ.
Congress: 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಸ್ತಿತ್ವಕ್ಕೆ'
ಆಹೋರಾತ್ರಿ ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಸಮಾವೇಶದಲ್ಲಿ ಶ್ರದ್ಧಾಂಜಲಿ ಸಲ್ಲಿಸುವಂತೆ ತಿಳಿಸಲಾಗಿದೆ. ಎಐಸಿಸಿ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷರು ಈ ಕುರಿತಾಗಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ.
Laxman Savadi: ಸಾರಿಗೆ ನೌಕರರಿಗೆ 'ಸಿಹಿ ಸುದ್ದಿ' ನೀಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.