ಬೆಂಗಳೂರು : ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ (HD Kumaraswamy) ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ.
1/3— H D Kumaraswamy (@hd_kumaraswamy) February 3, 2021
ಇದನ್ನೂ ಓದಿ : Siddaramaiah: 'ದಾರಿಯಲ್ಲಿ ನಿಂತ ಡಕೋಟಾ ಎಕ್ಸ್ ಪ್ರೆಸ್ ಸರ್ಕಾರ'
ರಕ್ಷಣಾ ಸಚಿವ ರಾಜನಾಥ್‌ಸಿಂಗ್ (Rajnath Singh) ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ (Aero India) ಕಾರ್ಯಕ್ರಮ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ
(BS Yediyurappa) ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ (Kannada) ಅಪಮಾನ ಕಾಣಲಿಲ್ಲವೇ ಎಂದು ಹೆಚ್ ಡಿಕೆ ಪ್ರಶ್ನಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ?
3/3— H D Kumaraswamy (@hd_kumaraswamy) February 3, 2021
ಕೇಂದ್ರ ಸಚಿವ ಅಮಿತ್ ಶಾ (Amith Shah) ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ (Media) ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ (Bengaluru) ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದವರು ಹೇಳಿದ್ದಾರೆ.
ಇದನ್ನೂ ಓದಿ : ST Somashekar: ರೈತರಿಗೊಂದು ಸಿಹಿ ಸುದ್ದಿ: ರಾಜ್ಯ ಸರ್ಕಾರದಿಂದ 57 ಸಾವಿರ ರೈತರ ಸಾಲ ಮನ್ನಾ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.