Siddaramaiah: 'ಬಿಜೆಪಿಯವರು ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಅಲ್ಪಮಾನವರು'

ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಸೋಮವಾರ ಟ್ವೀಟ್‌ ಮಾಡಿದ್ದಾರೆ.

Last Updated : Feb 22, 2021, 05:52 PM IST
  • ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು
  • ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
  • ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಸೋಮವಾರ ಟ್ವೀಟ್‌ ಮಾಡಿದ್ದಾರೆ.
Siddaramaiah: 'ಬಿಜೆಪಿಯವರು ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಅಲ್ಪಮಾನವರು' title=

ಬೆಂಗಳೂರು: ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಸಿದ್ದರಾಮಯ್ಯ(Siddaramaiah) ಸೋಮವಾರ ಟ್ವೀಟ್‌ ಮಾಡಿದ್ದಾರೆ.

Dr K Sudhakar: ಮತ್ತೆ ಮರುಕಳಿಸುತ್ತಾ ಲಾಕ್ ಡೌನ್ ದಿನಗಳು? ರಾಜ್ಯ ಸರ್ಕಾರ ಮಹತ್ವದ ನಿರ್ಧಾರ!

ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ(BJP) ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರ್‌ಎಸ್ಎಸ್ ಮತ್ತು ಬಿಜೆಪಿಯೇ ಕಾರಣ.

Ram Mandir: ಸಿದ್ದರಾಮಯ್ಯ ತವರಿನಲ್ಲಿ ಕಟ್ಟುತ್ತಿರುವ 'ರಾಮ ಮಂದಿರ' ಹೇಗಿದೆ ಗೊತ್ತಾ?

ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರ್‌ಎಸ್‌ಎಸ್(RSS) ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

"ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ"

ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿ(Mahatma Gandhi)ಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?

Heavy Rainfall: ರಾಜ್ಯದಲ್ಲಿ ವರುಣನ ಅಬ್ಬರ: ಉಡುಪಿಯಲ್ಲಿ ಭಾರೀ ಮಳೆ..!

ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್(Congress) ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ.

ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮ(Ram)ಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ?

DK Shivakumar: ಕೈ ತೊರೆದು ಕಮಲ ಸೇರಿದವರಿಗೆ ಮರಳಿ ಕಾಂಗ್ರೆಸ್ ಗೆ ಆಹ್ವಾನ ನೀಡಿದ ಡಿಕೆಶಿ!

ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ಕರ್ನಾಟಕದ ಬೆಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News