ಬೆಂಗಳೂರು : ಈ ಬಾರಿ ಬಜೆಟ್ ನಲ್ಲಿ (Budget) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕ್ಷೇತ್ರಕ್ಕೆ ಭರ್ಜರಿ ಅನುದಾನ ಘೋಷಿಸಲಾಗಿದೆ. ಸಿದ್ದರಾಮಯ್ಯ ಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ (Badami) ಬಂಪರ್ ಕೊಡುಗೆ ನೀಡಲಾಗಿದೆ. ಬಾದಾಮಿಯಲಿ ಜವಳಿ ಪಾರ್ಕ್ ಸ್ಥಾಪಿಸುವಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa) ಅವರಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರು. ಇದೀಗ ಸಿದ್ದರಾಮಯ್ಯ ಅವರ ಈ ಬೇಡಿಕೆಯನ್ನು ಈಡೇರಿಸಲಾಗಿದೆ.
ಬಾದಾಮಿಗೆ ಸಿಕ್ಕಿರುವ ಯೋಜನೆಗಳು ಯಾವುವು?
ಬಾದಾಮಿಯಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಜವಳಿ ಪಾರ್ಕ್ ನಿರ್ಮಿಸುವಂತೆ ಜನವರಿ 11ರಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಇಷ್ಟು ಮಾತ್ರವಲ್ಲದೆ, ಬಾದಾಮಿ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಯೋಜನೆಯನ್ನು ಘೋಷಿಸಲಾಗಿದೆ. ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಗೆ 25 ಕೋಟಿಯನ್ನು ರಾಜ್ಯ ಸರ್ಕಾರ ನೀಡಲಿದೆ.
ಇದನ್ನೂ ಓದಿ : Karnataka Budget 2021: ಮಾಶಾಸನ ಪಡೆಯುವ ವೃದ್ಧರು ಮತ್ತು ವಿದವೆಯರಿಗೆ ಭರ್ಜರಿ ಸಿಹಿ ಸುದ್ದಿ..!
ಇನ್ನು, ಸಿದ್ದರಾಮಯ್ಯ ಸರ್ಕಾರದ ಅವಧಿಯ ಅನುಗ್ರಹ ಯೋಜನೆಯನ್ನು (Anugraha Scheme) ಮುಂದುವರಿಸಲು ಸಿಎಂ ಬಿಎಸ್ ವೈ (BSY) ನಿರ್ಧರಿಸಿದ್ದಾರೆ. ಈ ಯೋಜನೆಯ ಅನ್ವಯ, ಕುರಿ ಅಥವಾ ಮೇಕೆ ಸತ್ತರೆ ಪರಿಹಾರ ನೀಡಲಾಗುತ್ತದೆ.
ಬಜೆಟ್ (Karnataka Budget) ಆರಂಭಕ್ಕೂ ಮುನ್ನ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದ್ದ ಸಿದ್ದರಾಮಯ್ಯ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಿಎಂ ಆಗಿ ಮುಂದುವರಿಯಲು ಮತ್ತು ಬಜೆಟ್ ಮಂಡಿಸಲು ಬಿಎಸ್ ವೈಗೆ ನೈತಿಕತೆ ಇಲ್ಲ ಎಂದು ಟೀಕಿಸಿದ್ದರು.
ಇದನ್ನೂ ಓದಿ : Karnataka Budget 2021 : ಬಜೆಟ್ನಲ್ಲಿ ಕ್ರೀಡೆ, ಪ್ರವಾಸೋದ್ಯಮಕ್ಕೆ ಸಿಕ್ಕಿದ್ದೇನು..?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.