Gold-Sliver Price: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬೆಳ್ಳಿ ದರದಲ್ಲಿ ಮತ್ತೆ ಏರಿಕೆ!

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,830 ರೂ. ಇದ್ದುದು ಇಂದು 45,600 ರೂ. ಆಗಿದೆ.

Last Updated : Mar 10, 2021, 12:35 PM IST
  • ಭಾರತದಲ್ಲಿ ಕಳೆದೊಂದು ವಾರದಿಂದ ಚಿನ್ನದ ಬೆಲೆ ಭಾರೀ ಕಡಿಮೆಯಾಗಿದೆ.
  • ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,830 ರೂ. ಇದ್ದುದು ಇಂದು 45,600 ರೂ. ಆಗಿದೆ.
  • ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಇದೇ ವೇಳೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗುತ್ತಿರುವುದರಿಂದ ಚಿನ್ನ ಕೊಳ್ಳುವವರು ನಿಟ್ಟುಸಿರು ಬಿಡುವಂತಾಗಿತ್ತು.
Gold-Sliver Price: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬೆಳ್ಳಿ ದರದಲ್ಲಿ ಮತ್ತೆ ಏರಿಕೆ! title=

ಬೆಂಗಳೂರು: ಭಾರತದಲ್ಲಿ ಕಳೆದೊಂದು ವಾರದಿಂದ ಚಿನ್ನದ ಬೆಲೆ ಭಾರೀ ಕಡಿಮೆಯಾಗಿದೆ. ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಇದೇ ವೇಳೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗುತ್ತಿರುವುದರಿಂದ ಚಿನ್ನ ಕೊಳ್ಳುವವರು ನಿಟ್ಟುಸಿರು ಬಿಡುವಂತಾಗಿತ್ತು. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದು, 24 ಕ್ಯಾರೆಟ್(Carat Gold) 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,830 ರೂ. ಇದ್ದುದು ಇಂದು 45,600 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 42,000 ರೂ. ಇದ್ದುದು ಇಂದು 41,800 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ನಿನ್ನೆ 66,200 ರೂ. ಇದ್ದ ಬೆಳ್ಳಿ ಬೆಲೆ ಇಂದು 67,000ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದು, ನಿನ್ನೆ 43,690 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 43,420 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 44,690 ರೂ. ಇದ್ದುದು ಇಂದು 44,420 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,600 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 41,800 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

LIC Nivesh Plus Plan: ಒಂದೇ ಬಾರಿಯ ಹೂಡಿಕೆಯಲ್ಲಿ ಪಡೆಯಬಹುದು ಉತ್ತಮ ರಿಟರ್ನ್

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ(Gold Price) 47,000 ರೂ. ದಾಟಿದೆ.

SBI ನಿಮ್ಮ ಅಕೌಂಟ್ ನಲ್ಲಿ ಬ್ಯಾಲೆನ್ಸ್ ಕಮ್ಮಿ ಇದ್ರು 'ಜಾಸ್ತಿ ಹಣ ತೆಗಿಬಹುದು..!

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, ನಿನ್ನೆ 66,200 ರೂ. ಇದ್ದ ಬೆಳ್ಳಿ ಬೆಲೆ(Silver Price) ಇಂದು 1 ಕೆಜಿಗೆ 67,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 67,000 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 71,000 ರೂ. ದಾಟಿದೆ.

Gold-Silver Price: ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ₹ 11,500 ಇಳಿಕೆ ಕಂಡ ಚಿನ್ನದ ಬೆಲೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News