Petrol-Diesel: 'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಸಿಗಲಿದೆ ಶೀಘ್ರದಲ್ಲಿ ಪೆಟ್ರೋಲ್'

ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ವೈಫಲ್ಯಗಳಿಂದ ಅಧೋಗತಿಗೆ ತಲುಪಿದ್ದ ದೇಶದ ವ್ಯವಸ್ಥೆಯನ್ನು ಸರಿಪಡಿಸಲು ಪೆಟ್ರೋಲ್‌, ಡೀಸೆಲ್‌ ಮೇಲೆ ಸುಂಕ ಹೆಚ್ಚಳ ಅನಿವಾರ್ಯವಾಗಿದೆ.

Last Updated : Mar 13, 2021, 12:41 PM IST
  • ದೇಶದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಅಭಿವೃದ್ಧಿಶೀಲ ದೇಶದ ನಿರ್ಮಾಣದ ಸಂಕಲ್ಪ ಹೊತ್ತಿದೆ.
  • ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ವೈಫಲ್ಯಗಳಿಂದ ಅಧೋಗತಿಗೆ ತಲುಪಿದ್ದ ದೇಶದ ವ್ಯವಸ್ಥೆಯನ್ನು ಸರಿಪಡಿಸಲು ಪೆಟ್ರೋಲ್‌, ಡೀಸೆಲ್‌ ಮೇಲೆ ಸುಂಕ ಹೆಚ್ಚಳ ಅನಿವಾರ್ಯವಾಗಿದೆ.
  • ಬಿಜೆಪಿ ಪಕ್ಷ ದೇಶದಲ್ಲಿ ಅತಿ ದೊಡ್ಡ ಪಕ್ಷವಾಗಿದ್ದು, ಮತ್ತಷ್ಟುಸಂಘಟನೆ ದೃಷ್ಠಿಯಿಂದ ಯುವ ಮೋರ್ಚಾ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಚಿವ ಎಂಟಿಬಿ ನಾಗರಾಜ್‌
Petrol-Diesel: 'ಬಡ, ಮಧ್ಯಮ ವರ್ಗಕ್ಕೆ ಕೈಗೆಟುಕುವ ದರದಲ್ಲಿ ಸಿಗಲಿದೆ ಶೀಘ್ರದಲ್ಲಿ ಪೆಟ್ರೋಲ್' title=

ಹೊಸಕೋಟೆ: ದೇಶದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ಅಭಿವೃದ್ಧಿಶೀಲ ದೇಶದ ನಿರ್ಮಾಣದ ಸಂಕಲ್ಪ ಹೊತ್ತಿದೆ. ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ವೈಫಲ್ಯಗಳಿಂದ ಅಧೋಗತಿಗೆ ತಲುಪಿದ್ದ ದೇಶದ ವ್ಯವಸ್ಥೆಯನ್ನು ಸರಿಪಡಿಸಲು ಪೆಟ್ರೋಲ್‌, ಡೀಸೆಲ್‌ ಮೇಲೆ ಸುಂಕ ಹೆಚ್ಚಳ ಅನಿವಾರ್ಯವಾಗಿದೆ. ಆದರೆ ಇದು ಕ್ಷಣಿಕವಾಗಿದ್ದು, ಮುಂದಿನ ದಿನಗಳಲ್ಲಿ ತೆರಿಗೆ ಕಡಿಮೆ ಮಾಡಿ ಬಡ ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಪೆಟ್ರೋಲ್‌, ಡೀಸೆಲ್‌ ಲಭ್ಯವಾಗಿದೆ. ನಾಗರೀಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.

ಬಿಜೆಪಿ ಪಕ್ಷ ದೇಶದಲ್ಲಿ ಅತಿ ದೊಡ್ಡ ಪಕ್ಷವಾಗಿದ್ದು, ಮತ್ತಷ್ಟುಸಂಘಟನೆ ದೃಷ್ಠಿಯಿಂದ ಯುವ ಮೋರ್ಚಾ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಚಿವ ಎಂಟಿಬಿ ನಾಗರಾಜ್‌(MTB Nagaraj) ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಯುವ ಮೋರ್ಚಾ ಉಪಾಧ್ಯಕ್ಷರನ್ನಾಗಿ ಮಂಜುನಾಥ್‌ ಯಾದಿ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಿ ಮಾತನಾಡಿದರು.

ಮಾಜಿ ಸಿಎಂ ವೀರಪ್ಪ ಮೊಯಿಲಿಗೆ 2020 ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಬಿಜೆಪಿ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಎ.ಅಪ್ಸರ್‌ ಮಾತನಾಡಿ, ನಗರದಲ್ಲಿ ಮಂಜುನಾಥ್‌ ಯಾದಿ ಅವರು ಬಿಜೆಪಿ(BJP) ಪಕ್ಷ ಸಂಘಟನೆ ದೃಷ್ಠಿಯಿಂದ ಅವಿರತ ಶ್ರಮಿಸುತ್ತಿರುವ ಪರಿಣಾಮ ಅವರ ಸೇವೆ ಪರಿಗಣಿಸಿ ಯುವ ಮೋರ್ಚಾ ಉಪಾಧ್ಯಕ್ಷರನ್ನಾಗಿ ಮಾಡಿ ಜವಾಬ್ದಾರಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷವನ್ನು ಅ​ಧಿಕಾರಕ್ಕೆ ತರಲು ಸಹಕರಿಸಬೇಕು ಎಂದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾ ಪಟ್ಟಿ ಪ್ರಕಟ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News