Kambala: ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಪ್ರವಾಸೋದ್ಯಮ ಇಲಾಖೆ ಉಡುಗೊರೆ

ಕರಾವಳಿ ಜಾನಪದ ಕ್ರೀಡೆ ಕಂಬಳವನ್ನು ಉತ್ತೇಜಿಸಿ ಪ್ರೋತ್ಸಾಹಿಸಲು ರೂ.1.00ಕೋಟಿಗಳ ಸಹಾಯಧನ ಬಿಡುಗಡೆ 

Written by - Yashaswini V | Last Updated : Mar 19, 2021, 10:20 AM IST
  • ಪ್ರವಾಸೋದ್ಯಮ ಇಲಾಖೆಯಿಂದ ಕಂಬಳಕ್ಕೆ ಉಡುಗೊರೆ
  • ವಾಸ್ತವವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
  • ಕಂಬಳವನ್ನು ಪ್ರೋತ್ಸಾಹಿಸಲು ಪ್ರತಿ ಕಂಬಳಕ್ಕೆ ಐದು ಲಕ್ಷ ರೂ.ಗಳನ್ನು ಸಹಾಯಧನವಾಗಿ ನೀಡುವುದಾಗಿ ಸರ್ಕಾರದ ಆದೇಶ
Kambala: ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಪ್ರವಾಸೋದ್ಯಮ ಇಲಾಖೆ ಉಡುಗೊರೆ title=
File Image

ಬೆಂಗಳೂರು :  ಕರಾವಳಿ ಜಾನಪದ ಕ್ರೀಡೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಸಹಾಯಧನ ನೀಡಲು ತೀರ್ಮಾನಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸುಮಾರು ಒಂದು ಕೋಟಿ ರೂ. ಹಣವನ್ನು ಕರಾವಳಿ ಜಾನಪದ ಕ್ರೀಡೆ 'ಕಂಬಳ'ಕ್ಕೆ ಸಹಾಯಧನವಾಗಿ ನೀಡಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ತಿಳಿಸಿದೆ.

ವಾಸ್ತವವಾಗಿ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ (Tourism)  ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಪ್ರತಿ ಕಂಬಳಕ್ಕೆ ಐದು ಲಕ್ಷ ರೂ.ಗಳನ್ನು ಸಹಾಯಧನವಾಗಿ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. 

No description available.

No description available.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳ (Kambala) ಗಳನ್ನು ಆಯೋಜಿಸಲು  ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ಮತ್ತು ಉಡುಪಿ 10 ಕಂಬಳಗಳನ್ನು ನಡೆಸಲು  ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ - C.P.Yogeshwar: ವಿಧಾನಸೌಧದಲ್ಲಿ ಡಿಕೆಶಿ ಇದ್ದ ಕೊಠಡಿಯನ್ನೇ ಪಡೆದ ಸಿಪಿ ಯೋಗೇಶ್ವರ್..!

ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ (CP Yogeshwar) ಅವರು ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ. ಆದರೆ ಇದಕ್ಕೆ ಕೆಲವು ಷರತ್ತುಗಳು ಅನ್ವಯವಾಗಲಿವೆ.

ಇದನ್ನೂ ಓದಿ - CP Yogeshwar: ಕುಮಾರಸ್ವಾಮಿ ಬಗ್ಗೆ 'ಹೊಸ ಬಾಂಬ್' ಸಿಡಿಸಿದ ಸಚಿವ ಯೋಗೀಶ್ವರ್!

ಕೆಲವು ಷರತ್ತುಗಳು:
1. ಯಾವ ಉದ್ದೇಶಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಅನುದಾನ ಬಳಸಿಕೊಳ್ಳತಕ್ಕದ್ದು.
2. ಮಂಜೂರು ಮಾಡಿದ ಅನುದಾನವನ್ನು ಸಮರ್ಪಕವಾಗಿ ಹಾಗೂ ಸಂಪೂರ್ಣವಾಗಿ ವಿನಿಯೋಗಿಸಿದಡಕ್ಕೆ ಹಣ ಬಳಕೆ ಪ್ರಮಾಣ ಪ್ರತ್ರವನ್ನು ಮತ್ತು ಲೆಕ್ಕಪರಿಸೋಧಕರಿಂದ ಲೆಕ್ಕಪಟ್ಟಿಯನ್ನು ಪಡೆಯತಕ್ಕದ್ದು. 
3. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಂಬಳವನ್ನು ಆಯ್ಕೆ ಮಾಡತಕ್ಕದ್ದು.
4. ಆಯೋಜಿಸಲಾಗುವ ಕಂಬಳವು ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವಂತಿರಬೇಕು.
5. ಕಂಬಳವನ್ನು ಒಂದು ಗ್ರೂಪ್/ತಂಡದಿಂದ ಆಯೋಜಿಸಬೇಕು. ಸದರಿ ತಂಡವು ಒಂದೇ ಕುಟುಂಬಕ್ಕೆ ಸೇರಿದಂತಿರಬಾರದು.
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News