ನವದೆಹಲಿ: ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಾಧೀಶ ಡಿ.ಇ.ಕೋಥಾಲಿಕರ್ ಅವರು 83 ವರ್ಷದ ಸ್ಟಾನ್ ಸ್ವಾಮಿಯವರ ಜಾಮೀನು ಅರ್ಜಿಯನ್ನು ಅರ್ಹತೆ ಮತ್ತು ವೈದ್ಯಕೀಯ ಆಧಾರದ ಮೇಲೆ ತಿರಸ್ಕರಿಸಿದರು.
ಜೆಸ್ಯೂಟ್ ಪಾದ್ರಿ ಮತ್ತು ಕಾರ್ಯಕರ್ತರಾದ ಸ್ಟಾನ್ ಸ್ವಾಮಿ ಅವರನ್ನು 2020 ರ ಅಕ್ಟೋಬರ್‌ನಲ್ಲಿ ರಾಂಚಿಯಿಂದ ಬಂಧಿಸಲಾಯಿತು ಮತ್ತು ನಂತರ ಅವರನ್ನು ನವೀ ಮುಂಬಯಿಯ ತಾಲೋಜ ಕೇಂದ್ರ ಕಾರಾಗೃಹದಲ್ಲಿ ದಾಖಲಿಸಲಾಗಿದೆ.ಅವರ ವಕೀಲರ ಪ್ರಕಾರ, ಸ್ಟಾನ್ ಸ್ವಾಮಿ (Stan Swamy) ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಮತ್ತು ಅವರ ಎರಡೂ ಕಿವಿಗಳಿಂದ ಕೇಳುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆ. ಅವರು ಹಲವಾರು ಇತರ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
ಇದನ್ನೂ ಓದಿ: 83 ವರ್ಷದ ಸಾಮಾಜಿಕ ಕಾರ್ಯಕರ್ತ ಸ್ಟಾನ್ ಸ್ವಾಮಿ ಅಕ್ಟೋಬರ್ 23 ವರಗೆ ಜೈಲಿಗೆ
ಸ್ಟಾನ್ ಸ್ವಾಮಿ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧಿಸಿತ್ತು, ಸ್ಟಾನ್ ಸ್ವಾಮಿ ಅವರು "ವಿಸ್ಟಾಪನ್ ವಿರೋಡಿ ಜಾನ್ ವಿಕಾಸ್ ಆಂಡೋಲನ್" ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್" ನಂತಹ ಸಂಸ್ಥೆಗಳ ತೀವ್ರ ಬೆಂಬಲಿಗರು ಎಂದು ತನಿಖೆ ಬಹಿರಂಗಪಡಿಸಿದೆ ಎಂದು ಹೇಳಿದೆ.
ಎಲ್ಗರ್ ಪರಿಷತ್-ಮಾವೋವಾದಿಗಳ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾನ್ ಸ್ವಾಮಿಯ ಸಂಪರ್ಕವನ್ನು ಸ್ಥಾಪಿಸುವಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಫಲವಾಗಿದೆ ಎಂದು ಸ್ಟಾನ್ ಸ್ವಾಮಿಯ ವಕೀಲ ಷರೀಫ್ ಶೇಖ್ ವಾದಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.