ನವದೆಹಲಿ: Coronavirus - ನಿರಂತರವಾಗಿ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ಪರಕರಣಗಳ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಮಾರ್ಚ್ 28 ರಿಂದ ನೈಟ್ ಕರ್ಫ್ಯೂ (Maharashtra Curfew) ಜಾರಿಗೊಳಿಸುವುದಾಗಿ ಘೋಷಿಸಿದೆ. ಮುಖ್ಯಮಂತ್ರಿಗಳ ಕಚೇರಿ ಈ ಘೋಷಣೆ ಮಾಡಿದೆ.
ಸಮೀಕ್ಷಾ ಸಭೆಯ ಬಳಿಕ ನಿರ್ಧಾರ
ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ನಿರ್ಧಾರ ಕೈಗೊಳ್ಳುವ ಮೊದಲು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಜ್ಯದ ಕರೋನಾದ ಪರಿಸ್ಥಿತಿಯನ್ನು ಪರಿಶೀಲಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಎಲ್ಲಾ ವಿಭಾಗೀಯ ಆಯುಕ್ತರು, ಸಂಗ್ರಾಹಕರು, ಎಸ್ಪಿಗಳು ಮತ್ತು ಜಿಲ್ಲಾ ಆಸ್ಪತ್ರೆಗಳ ಹಿರಿಯ ವೈದ್ಯರು ಭಾಗವಹಿಸಿದ್ದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನದ (Covid-19) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮುಂದೆ ಕಾರ್ಯತಂತ್ರವನ್ನು ಸಿದ್ಧಪಡಿಸುವುದು ಸಭೆಯ ಉದ್ದೇಶವಾಗಿತ್ತು. ಈ ಸಭೆಯಲ್ಲಿ ಚರ್ಚಿಸಿದ ನಂತರ, ಇಡೀ ರಾಜ್ಯದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಉದ್ಧವ್ ಠಾಕ್ರೆ ಸರ್ಕಾರ ಮಾರ್ಚ್ 28 ರಿಂದ ನೈಟ್ ಕರ್ಫ್ಯೂ ಜಾರಿಗೆ ತರಲು ನಿರ್ಧರಿಸಿದೆ.
10ನೇ ಮತ್ತು 12ನೆ ತರಗತಿಯ ವಿದ್ಯಾರ್ಥಿಗಳಿಗೆ ನೆಮ್ಮದಿ
ಇದೇ ವೇಳೆ ರಾಜ್ಯ ಸರ್ಕಾರ 10ನೆ ಮತ್ತು 12ನೆ ತರಗತಿಯ ವಿದ್ಯಾರ್ಥಿಗಳಿಗೆ ಭಾರಿ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಈ ಕುರಿತು ಮಾತನಾಡಿರುವ ರಾಜ್ಯ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್, ಕೊರೊನಾ ಪ್ರಕೋಪದ ಹಿನ್ನೆಲೆ ಯಾರ ಮನೆ ಅಥವಾ ಆವರಣಗಳನ್ನು ಸೀಲ್ ಮಾಡಲಾಗಿದೆಯೋ ಆ ವಿದ್ಯಾರ್ಥಿಗಳಿಗಾಗಿ ಜೂನ್ ತಿಂಗಳಿನಲ್ಲಿ ವಿಶೇಷ ಪರೀಕ್ಷೆಯನ್ನು ಆಯೋಜಿಸಲಾಗುವುದು. ಇಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಮತ್ತೊಂದು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ- Centres Letter To States - ಹೋಳಿ, ಈದ್ ಹಬ್ಬಗಳ ಮೇಲೆ ಕೊರೊನಾ ಕಾರ್ಮೋಡ, ಕಠಿಣ ಕ್ರಮ ಜರುಗಿಸಲು ಆದೇಶಿಸಿದ ಕೇಂದ್ರ
ನೈಟ್ ಕರ್ಫ್ಯೂ ಕುರಿತು ಮುಖ್ಯಮಂತ್ರಿಗಳ ಸಚಿವಾಲಯ ಹೊರಡಿಸಿರುವ ಹೇಳಿಕೆಯಲ್ಲಿ, "ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ರೋಗಿಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ದಟ್ಟಣೆ ತಡೆಗಟ್ಟಲು, ಹೆಚ್ಚುತ್ತಿರುವ ಸೋಂಕನ್ನು ತಡೆಗಟ್ಟಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಭಾನುವಾರ (ಮಾರ್ಚ್ 28) ರಾತ್ರಿಯಿಂದ ಕರ್ಫ್ಯೂ ವಿಧಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ" ಎಂದು ಹೇಳಲಾಗಿದೆ,
ಇದನ್ನೂ ಓದಿ-ದೆಹಲಿ, ಮತ್ತು ಕರ್ನಾಟಕದಲ್ಲಿ ಆತಂಕ ತರಿಸಿದ ಕೊರೊನಾ ಪ್ರಕರಣಗಳ ಹೆಚ್ಚಳ
ಸಿಎಂ ಕಚೇರಿಯ (CM Office) ಪರವಾಗಿ ಹೊರಡಿಸಲಾಗಿರುವ ಹೇಳಿಕೆಯಲ್ಲಿ, ಎಲ್ಲಾ ಮಾಲ್ಗಳನ್ನು ರಾತ್ರಿ 8 ರಿಂದ ಬೆಳಿಗ್ಗೆ 7 ರವರೆಗೆ ಮುಚ್ಚಲಾಗುವುದು ಎಂದು ಹೇಳಲಾಗಿದೆ. ರಾಜ್ಯದಲ್ಲಿ ದಾಖಲೆಯ ಹೊಸ ಪ್ರಕರಣಗಳು ಬರುತ್ತಿರುವ ಸಮಯದಲ್ಲಿ ಮಹಾರಾಷ್ಟ್ರ ಸರ್ಕಾರ (Maharashtra Government) ಈ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಕುರಿತು ಹೇಳಿಕೆ ನೀಡಿರುವ ಸಿಎಂ ಉದ್ಧವ್ ಠಾಕ್ರೆ, "ಕರೋನಾ ವೈರಸ್ (Coronavirus)ಆತಂಕ ಇನ್ನೂ ಮುಗಿದಿಲ್ಲ ಮತ್ತು ಅದು ಹೆಚ್ಚಾಗುತ್ತಿದೆ. ಇದನ್ನು ಜನರು ಅರ್ಥಮಾಡಿಕೊಳ್ಳಬೇಕು. ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಸ್ಥಳೀಯ ಪರಿಸ್ಥಿತಿಯ ಪ್ರಕಾರ, ಜಿಲ್ಲಾಧಿಕಾರಿಗಳು ಲಾಕ್ಡೌನ್ ವಿಧಿಸಬಹುದು, ಆದರೆ ಅದಕ್ಕೂ ಮೊದಲು ಅವರು ಜನರಿಗೆ ಸಾಕಷ್ಟು ಸಮಯವನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Coronavirus: ಕರೋನಾದಿಂದ ರಕ್ಷಿಸಬಹುದಾದ ಹ್ಯಾಂಡ್ ಸ್ಯಾನಿಟೈಜರ್ಗಳಿಂದ ಕ್ಯಾನ್ಸರ್ ಅಪಾಯ