"ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸು"

ಬಿಜೆಪಿ ಸರ್ಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸಾಗುತ್ತದೆ. ನುಡಿದಂತೆ ನಡೆಯಲು ಬಿಜೆಪಿಗೆ ಆಗಲಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ. 20 ಲಕ್ಷ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಒಬ್ಬರಿಗೂ ಅದು ತಲುಪಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Last Updated : Mar 29, 2021, 12:19 AM IST
  • ಎಲ್ಲ ವರ್ಗದ ಜನರಿಗೆ ಒಂದು ತಿಂಗಳು 5 ಸಾವಿರ ಕೊಡುವುದಾಗಿ ಹೇಳಿದ್ದರು, ಅದನ್ನೂ ಕೊಟ್ಟಿಲ್ಲ. ಚಾಲಕರು, ರೈತರು, ಸವಿತಾ ಸಮಾಜ, ನೇಯ್ಗೆಯವರಿಗೆ, ಬಟ್ಟೆ ಹೊಲಿಯುವವರಿಗೆ ಯಾರಿಗೂ ನೀಡಲಿಲ್ಲ.
"ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸು"  title=
file photo

ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸಾಗುತ್ತದೆ. ನುಡಿದಂತೆ ನಡೆಯಲು ಬಿಜೆಪಿಗೆ ಆಗಲಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ. 20 ಲಕ್ಷ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಒಬ್ಬರಿಗೂ ಅದು ತಲುಪಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಎಲ್ಲ ವರ್ಗದ ಜನರಿಗೆ ಒಂದು ತಿಂಗಳು 5 ಸಾವಿರ ಕೊಡುವುದಾಗಿ ಹೇಳಿದ್ದರು, ಅದನ್ನೂ ಕೊಟ್ಟಿಲ್ಲ. ಚಾಲಕರು, ರೈತರು, ಸವಿತಾ ಸಮಾಜ, ನೇಯ್ಗೆಯವರಿಗೆ, ಬಟ್ಟೆ ಹೊಲಿಯುವವರಿಗೆ ಯಾರಿಗೂ ನೀಡಲಿಲ್ಲ.

ಇದನ್ನೂ ಓದಿ: DK Shivaklumar: 'ರಾಜಕಾರಣದಲ್ಲಿ ಜೈಕಾರ, ಧಿಕ್ಕಾರ, ಕಲ್ಲೆಸೆತ ಎಲ್ಲ ಕಾಮನ್'

ಜನರೇ ಈ ಸಂದರ್ಭದಲ್ಲಿ ರೊಚ್ಚಿಗೆದ್ದು ತೀರ್ಮಾನ ಮಾಡಿದ್ದಾರೆ. ಯುವಕರು ಉದ್ಯೋಗ ಕೇಳಿದರೆ ಪಕೋಡಾ ಮಾರು ಅಂತಾರೆ. 15 ಲಕ್ಷ ಕೊಡ್ತೀನಿ ಅಂದ್ರು. ಬಿಡಿಗಾಸು ಕೊಡಲಿಲ್ಲ.ಎಲ್ಲ ವರ್ಗದ ಜನರಿಗೆ ಅಪಾರ ಅವಮಾನವಾಗಿದೆ.ಅಡುಗೆ ಅನಿಲದಿಂದ ಮಹಿಳೆಯರು ಸಂಕಷ್ಟ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ. ಇದಕ್ಕಿಂತ ಬೇರೆ ನೋವು ಏನು ಬೇಕು? ಕೊರೋನಾ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಬೇಸತ್ತಿರುವ ಜನರೇ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆ.’

ನಾನು ಎಲ್ಲವನ್ನೂ ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಳ್ಳುತ್ತೇನೆ:

ಬೆಳಗಾವಿಯಲ್ಲಿ ತಮ್ಮ ಬೆಂಬಲಿಗರ ಕಾರಿನ ಮೇಲೆ ಚಪ್ಪಲಿ, ಕಲ್ಲು ತೂರಾಟ, ಗಲಾಟೆ ಹಾಗೂ ಅದಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, ‘ಅವರು ಜವಾಬ್ದಾರಿಯುತ ಗೃಹ ಸಚಿವರಾಗಿ ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ರಾಜಕೀಯದಲ್ಲಿ ಇದೆಲ್ಲಾ ಸಹಜ. ನಮಗೆ ಹೂವಿನ ಹಾರ ಹಾಕುವವರು ಇರ್ತಾರೆ, ಜೈಕಾರ ಹಾಕುವವರೂ ಇರ್ತಾರೆ, ಧಿಕ್ಕಾರ ಹಾಕುವವರೂ ಇರ್ತಾರೆ, ಕಲ್ಲು ಹೊಡೆಯುವವರೂ ಇರ್ತಾರೆ. ಹಿಂದೆ ಮೊಟ್ಟೆ ಎಸೆಯುತ್ತಿದ್ದರು. ಹಾಗೆಯೇ ಹೂವು- ಸೇಬಿನ ಹಾರವನ್ನೂ ಹಾಕ್ತಾರೆ.

ಇದನ್ನೂ ಓದಿ: "ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಹತಾಶೆ ಮಾತಿಗೆ ಉತ್ತರಿಸುವುದಿಲ್ಲ'

ಈಗ ಕೆಲವರು ದೊಡ್ಡ, ದೊಡ್ಡ ಸಾಧನೆ ಮಾಡಿದ್ದಾರಲ್ಲಾ ಅದಕ್ಕೆ ಹೀಗೆಲ್ಲಾ ಮಾಡ್ತಾರೆ. ಏನಾಯ್ತೋ, ಬಿಟ್ಟಿತೊ ನಾನು ಎಲ್ಲವನ್ನೂ ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಳ್ಳುತ್ತೇನೆ. ಕ್ಷೇತ್ರದ, ರಾಜ್ಯದ ಮಹಾಜನತೆ ನೋಡುತ್ತಿದ್ದಾರೆ. ಚುನಾವಣೆಯನ್ನು ಶಾಂತ ರೀತಿಯಲ್ಲಿ ನಾವು ನಡೆಸುತ್ತೇವೆ. ಆದರೆ ಬಿಜೆಪಿಯವರು ಎಂತೆಂತಹಾ ಮುತ್ತು ರತ್ನಗಳನ್ನು ಇಟ್ಟುಕೊಂಡಿದ್ದಾರೆ ಎಂಬುದನ್ನು ನೋಡಿ ಬಹಳ ಸಂತೋಷವಾಗುತ್ತಿದೆ’ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News