ಬೆಂಗಳೂರು: ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಯಲ್ಲಿ 159 ಕೋಟಿ ಕಾಮಗಾರಿ ಹಂಚಿಕೆಯಲ್ಲಿ ಜಲಸಂಪನ್ಮೂಲ ಸಚಿವರು 25ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
2016ರಲ್ಲಿ ಜಲಸಂಪನ್ಮೂಲ ಇಲಾಖೆಯ ಅಧೀನದಲ್ಲಿ ವಿಶ್ವೇಶ್ವರಯ್ಯ ಜಲ ನಿಗಮವನ್ನು ಸ್ಥಾಪಿಸಲಾಗಿದೆ. ಅದರ ಅಡಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಟೆಂಡರ್ ಕರೆಯಲಾಗಿದೆ. ಗುತ್ತಿಗೆ ನೀಡುವಾಗ ತ್ರಿಪುರ, ಮಣಿಪುರ ರಾಜ್ಯಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಇದೆ ಎಂದು ನಕಲಿ ಪ್ರಮಾಣಪತ್ರ ಸಲ್ಲಿಸಿದ NPCC ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಯಡಿಯೂರಪ್ಪ ದೂರಿದ್ದಾರೆ.
ಈ ಟೆಂಡರ್ ಪ್ರಕ್ರಿಯೆಯಲ್ಲಿ ಸಚಿವ ಎಂ.ಪಿ. ಪಾಟೀಲ್ 25ಕೋಟಿ ರೂ.ಗಳಿಗೂ ಹೆಚ್ಚು ಕಿಕ್ ಬ್ಯಾಕ್ ಪಡೆದಿರುವುದಾಗಿ ಆಪಾದಿಸಿರುವ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಪ್ರಕರಣದಲ್ಲಿ ತಮ್ಮ ಕಮಿಷನ್ ಪಾಲು ಇಲ್ಲ ಎನ್ನುವುದಾದಲ್ಲಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಗರಣದಿಂದಾಗಿ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿದೆ. ಸಿಎಂ ಸಿದ್ದರಾಮಯ್ಯನವರು ಭ್ರಷ್ಟ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ರವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಿ, ಅಕ್ರಮದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಈ ಹಗರಣದಲ್ಲಿ ತಮಗೆ ಸಿಕ್ಕಿರುವ ಕಮಿಷನ್ ಎಷ್ಟು ಎಂಬುದನ್ನೂ #10PercentCM ಬಹಿರಂಗಪಡಿಸಬೇಕು.
— B.S. Yeddyurappa (@BSYBJP) March 22, 2018