ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Last Updated : Apr 25, 2021, 01:29 AM IST
  • ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 01 ರಿಂದ ಜೂನ್ 30 ರವರೆಗೆ ಕಾಲವಕಾಶ ನೀಡಲಾಗಿದ್ದು, ಪರಿಶಿಷ್ಟ ಜಾತಿಯ ಕಾನೂನು ಪದವೀಧರರು www.sw.kar.nic.in ವೆಬ್‌ಸೈಟ್‌ಗೆ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರು www.tw.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ನೀವು ಸ್ನಾತಕೋತ್ತರ ವಿದ್ಯಾರ್ಥಿಗಳೇ? ಹಾಗಾದರೆ ನಿಮಗಿದೆ ಇಲ್ಲಿ ಅವಕಾಶ !

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಮತ್ತು ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಜೂನ್ 30 ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮತ್ತು ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News