ಬೆಂಗಳೂರು: ಕಾಂಗ್ರೆಸ್ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ಸಿದ್ಧ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಕರ್ನಾಟಕ ಸಂಘಟನೆ ಇಂದು ದೇವೇಗೌಡರನ್ನು ಭೇಟಿ ಮಾಡಿ ಬಿಜೆಪಿ ಸೋಲಿಸಲು ಜೆಡಿಎಸ್, ಕಾಂಗ್ರೆಸ್ ಒಂದಾಗಬೇಕೆಂದು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು, ಕಾಂಗ್ರೆಸ್ ನಮಗೆ ಎಷ್ಟು ಸೀಟುಗಳನ್ನು ಬಿಟ್ಟುಕೊಡುತ್ತದೆ, ನಾವು ಅವರಿಗೆ ಎಷ್ಟು ಸೀಟುಗಳನ್ನು ಬಿಟ್ಟುಕೊಡಬೇಕು. ಈ ಬಗ್ಗೆ ಕಾಂಗ್ರೆಸ್ ಪಕ್ಷ ಚರ್ಚಿಸಿ ನಮಗೆ ತೀರ್ಮಾನ ತಿಳಿಸಲಿ ಎಂದು ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಮುಂದುವರೆದು, ಕಾಂಗ್ರೆಸ್ ದೊಡ್ಡ ಪಕ್ಷ, ಅವರೇ ಮೊದಲು ಪಟ್ಟಿ ಕಳುಹಿಸಲಿ. ಮೈತ್ರಿ ಪ್ರಸ್ತಾವನೆ ಬಂದರೆ ಸಂಪೂರ್ಣ ಸಹಕಾರ ನೀಡುತ್ತೇವೆ. ಸಮಾಜವಾದಿ ಪಕ್ಷ ಸೀಟು ಕೇಳಿದರೆ ಅವರಿಗೂ ಕೆಲವು ಸೀಟು ಬಿಟ್ಟುಕೊಡಲು ಸಿದ್ಧ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.