Total Lockdown : ಕೊರೋನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆ ಮೇ 16 ರವರೆಗೆ ಸಂಪೂರ್ಣ ಲಾಕ್‌ಡೌನ್!

ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ 

Last Updated : May 6, 2021, 01:31 PM IST
  • ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶ
  • ಕೇರಳದಲ್ಲಿ ಇದೀಗ ಸಂಪೂರ್ಣ ಲಾಕ್ ಡೌನ್ ‍ಘೋಷಣೆಯಾಗಿದೆ.
  • ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ
Total Lockdown : ಕೊರೋನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆ ಮೇ 16 ರವರೆಗೆ ಸಂಪೂರ್ಣ ಲಾಕ್‌ಡೌನ್! title=

ಕೇರಳ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇರಳದಲ್ಲಿ ಇದೀಗ ಸಂಪೂರ್ಣ ಲಾಕ್ ಡೌನ್ ‍ಘೋಷಣೆಯಾಗಿದೆ.

ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ(Kerala) ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡುತ್ತಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಇದನ್ನೂ ಓದಿ : Oxygen ಕೊರತೆಯಿಂದಾಗಿ ಭಯಪಡಬೇಡಿ, ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಸಿಲಿಂಡರ್‌ ತಲುಪಿಸಲಿದೆ

ಸರ್ಕಾರದ ಈ ನಿರ್ಧಾರಕ್ಕೆ ಬುಧವಾರ ಕೇರಳದಲ್ಲಿ 41,953 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದೇ ಕಾರಣವಾಗಿದೆ. ಲಾಕ್‌ಡೌನ್(Kerala Lockdown) ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ ಎಂಬುದು ಮಾರ್ಗಸೂಚಿಯಲ್ಲಿ ತಿಳಿದು ಬರಲಿದೆ.

ಇದನ್ನೂ ಓದಿ : ನಿಮಗೆ ಗೊತ್ತಿಲ್ಲದಂತೆ ನಿಮ್ಮ facebook profile ಯಾರು ನೋಡುತ್ತಿದ್ದಾರೆ ಎನ್ನುವುದನ್ನು ಹೀಗೆ ತಿಳಿಯಿರಿ

ಕಳೆದ ವರ್ಷ ಕೇರಳದಲ್ಲಿಯೇ ಮೊದಲ ಕೋವಿಡ್(Covid-19) ಪ್ರಕರಣ ಪತ್ತೆಯಾಗಿತ್ತು. ಆದರೆ, ನಂತರದ ದಿನಗಳಲ್ಲಿ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಸೋಂಕು ಹತೋಟಿಗೆ ಬಂದಿತ್ತು. ಈ ಬಾರಿಯೂ ಎರಡನೇ ಅಲೆ ಕೇರಳದಲ್ಲಿ ಹೆಚ್ಚಿದೆ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡಲು ಸರ್ಕಾರದ ನಿರ್ಧರಿಸಿದೆ. ಇದರ ಜೊತೆಗೆ ಲಸಿಕಾ ಅಭಿಯಾನವನ್ನೂ ಚುರುಕುಗೊಳಿಸಿದೆ.

ಇದನ್ನೂ ಓದಿ : LPG Offers: ಅಡುಗೆ ಅನಿಲದ ಮೇಲೆ ಸಿಗಲಿದೆ 800 ರೂಪಾಯಿಗಳ ರಿಯಾಯಿತಿ ; ಮೇ 31ರವರೆಗೆ ಇರಲಿದೆ ಈ ಆಫರ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News