Delhi Lockdown : ರಾಷ್ಟ್ರ ರಾಜಧಾನಿಯಲ್ಲಿ ಮೇ 17ರ ವರೆಗೆ ಮತ್ತೆ ಲಾಕ್‌ಡೌನ್ ವಿಸ್ತರಣೆ..!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೇ 17ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ

Last Updated : May 9, 2021, 01:53 PM IST
  • ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ
  • ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೇ 17ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ
  • ಕಳೆದ ಎರಡು ಮೂರು ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು ಶೇಕಡಾ 35ರಿಂದ 23ಕ್ಕೆ ಇಳಿಕೆ
Delhi Lockdown : ರಾಷ್ಟ್ರ ರಾಜಧಾನಿಯಲ್ಲಿ ಮೇ 17ರ ವರೆಗೆ ಮತ್ತೆ ಲಾಕ್‌ಡೌನ್ ವಿಸ್ತರಣೆ..! title=

ನವದೆಹಲಿ : ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೇ 17ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ದೆಹಲಿಯಲ್ಲಿ ಇನ್ನೊಂದು ವಾರ ಲಾಕ್‌ಡೌನ್(Lockdown) ವಿಸ್ತರಿಸಲಾಗಿದ್ದು, ಮೆಟ್ರೊ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : Surendra Singh : ಕೊರೋನಾ ಹರಡುವಿಕೆಯನ್ನ ತಡೆಯಲು ಗೋ ಮೂತ್ರ ಕುಡಿಯಿರಿ : ಬಿಜೆಪಿ ಶಾಸಕ

ಕೋವಿಡ್-19(Covid-19) ಎರಡನೇ ಅಲೆ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ಏಪ್ರಿಲ್ 20ರಂದು ದೆಹಲಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು.

ಇದನ್ನೂ ಓದಿ : ಕಂಪ್ಲೀಟ್ ಲಾಕ್ ಡೌನ್ ಅನುಷ್ಠಾನಕ್ಕೆ ಬರುತ್ತಾ..? ಐಎಂಎ ಹೇಳಿದ್ದೇನು..?

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal), ಕಳೆದ ಎರಡು ಮೂರು ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು ಶೇಕಡಾ 35ರಿಂದ 23ಕ್ಕೆ ಇಳಿಕೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ : Vehicle Re-Registration : ಕೇಂದ್ರ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ : ವಾಹನ ಮಾಲೀಕತ್ವದ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆ!

ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ವಿವಿಧ ಸ್ಥಳಗಳಲ್ಲಿ ಆಮ್ಲಜನಕ(Oxygen) ಹಾಸಿಗೆಗಳನ್ನು ಹೆಚ್ಚಿಸಲು ನಾವು ಲಾಕ್‌ಡೌನ್ ಅವಧಿಯನ್ನು ಬಳಕೆ ಮಾಡಿದ್ದೇವೆ. ದೆಹಲಿಯಲ್ಲಿ ಆಮ್ಲಜನಕ ಪೂರೈಕೆಯ ಪರಿಸ್ಥಿತಿ ಸುಧಾರಿಸಿದೆ. ಸದ್ಯಕ್ಕೆ ಭಯದ ಆತಂಕವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ಮನೆ ಬಾಗಿಲಿಗೆ ವಿತರಣೆಯಾಗಲಿದೆ ಮದ್ಯ ; 'ಎಣ್ಣೆ' Home deliveryಗೂ ಇದೆ App

ರಾಷ್ಟ್ರ ರಾಜಧಾನಿಯಲ್ಲಿ ಮೂರನೇ ಹಂತದ ಕೋವಿಡ್ ಲಸಿಕೆ(Covid Vaccine) ವಿತರಣೆ ಬಗ್ಗೆ ಮಾಹಿತಿ ನೀಡಿದ ಅವರು, ನಾವು ನಮ್ಮ ಶಾಲೆಗಳಲ್ಲಿ ಅತ್ಯುತ್ತಮ ವ್ಯವಸ್ಥೆಯನ್ನು ಮಾಡಿದ್ದೇವೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಲಸಿಕೆಗಳ ಕೊರತೆಯಿದ್ದರೂ ಕೇಂದ್ರ ಸರ್ಕಾರ ನಮಗೆ ನೆರವು ಮಾಡಲಿದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : Amazon Prime ಸದಸ್ಯರಿಗೊಂದು ಆಘಾತ ; ಕರೋನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕಂಪನಿ ತೆಗೆದುಕೊಂಡ ನಿರ್ಧಾರ ಇದು

ಶನಿವಾರ ಬಿಡುಗಡೆಯಾದ ದೆಹಲಿ ಹೆಲ್ತ್ ಬುಲೆಟಿನ್ ಪ್ರಕಾರ, ಕಳೆದ 24 ತಾಸಿನಲ್ಲಿ 17,364 ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, 332 ಮಂದಿ ಮೃತಪಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News