ಬೆಂಗಳೂರು : ರಾಜ್ಯದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್ ಕಂಡು ಬಂದಿದೆ ಮತ್ತು ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಬ್ಲ್ಯಾಕ್ ಫಂಗಸ್ ಬಗ್ಗೆ ಚರ್ಚಿಸಲು ಇಂದು ಆರೋಗ್ಯ ಸಚಿವ ಕೆ.ಸುಧಾಕರ್(K Sudhakar) ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು. ನೇತ್ರ ತಜ್ಞ ಭುಜಂಗಶೆಟ್ಡಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಿಸಿದ್ದರು. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಮೃತಪಟ್ಟ ಮೂವರು ಬೆಂಗಳೂರಿನವರಾಗಿದ್ದಾರೆ. ಬೆಂಗಳೂರು ಹೊರತುಪಡಿಸಿ ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್ಲಾಕ್ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
🔹ಇದರ ಚಿಕಿತ್ಸೆಗೆ ಎಂಎಂಸಿ,ಮೈಸೂರು, ಸಿಮ್ಸ್, ಶಿವಮೊಗ್ಗ, ಜಿಮ್ಸ್,ಕಲಬುರ್ಗಿ, ಕಿಮ್ಸ್ ಹುಬ್ಬಳ್ಳಿ, ಕೆಎಂಸಿ, ಮಣಿಪಾಲ, ವೆನ್ಲಾಕ್ ಆಸ್ಪತ್ರೆ, ಮಂಗಳೂರು ಇವುಗಳನ್ನು ಪ್ರಾದೇಶಿಕ ಕೇಂದ್ರಗಳಾಗಿ ಗುರುತಿಸಲಾಗಿದೆ.
🔹ಸಾರ್ವಜನಿಕರು ಇದರ ಬಗ್ಗೆ ಆತಂಕ ಪಡದೆ, ಕೊರೊನಾದಿಂದ ಗುಣಮುಖರಾದ ನಂತರ ಮುನ್ನೆಚ್ಚರಿಕೆ ವಹಿಸಬೇಕೆಂದು ಕೋರುತ್ತೇನೆ.
4/4 pic.twitter.com/sO2QVLXoJz
— Dr Sudhakar K (@mla_sudhakar) May 17, 2021
ಇದನ್ನೂ ಓದಿ : S Suresh Kumar : SSLC - ದ್ವಿತೀಯ PUC ಪರೀಕ್ಷೆ ರದ್ದು? ಈ ಸುದ್ದಿ ನಿಜಾನಾ ಇಲ್ಲಿದೆ ನೋಡಿ!
ಕೇಂದ್ರ ಸರ್ಕಾರ ಕಪ್ಪು ಶಿಲೀಂದ್ರಿ ಕಾಯಿಲೆ(Black Fungus)ಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ತಿಳಿಸಿದೆ. ಇದರ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಬ್ಲ್ಯಾಕ್ ಫಂಗಸ್ ಕೋವಿಡ್ನಷ್ಟು ಭೀಕರವಲ್ಲ. ಕೇಂದ್ರ ಸರ್ಕಾರದಿಂದ ಈ ಕಾಯಿಲೆ ಬಗ್ಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ. ಕೆಲವು ರಾಜ್ಯದಲ್ಲಿ ಪ್ರೋಟೋಕಾಲ್ ಜಾರಿಯಲ್ಲಿದೆ. ಹೀಗಾಗಿ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : BC Patil : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.