ಬೆಂಗಳೂರು: ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಶೈಕ್ಷಣಿಕ ಪ್ರಾರಂಭೋತ್ಸವವನ್ನು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಉದ್ಘಾಟಿಸಿದರು.
ಅಂಬೇಡ್ಕರರವರ ಚಿಂತನೆಯ ತಳಹದಿಯ ಮೇಲೆ ನಿರ್ಮಾಣಗೊಂಡಿರುವ ವಿಶ್ವ ದರ್ಜೆಯ ಅರ್ಥಶಾಸ್ತ್ರ ಅಧ್ಯಯನ ಕೇಂದ್ರದ ಕಾರ್ಯಕ್ರಮವು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮನಮೋಹನ್ ಸಿಂಗ್ ಅವರ ಪತ್ನಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಸಚಿವರಾದ ಬಸವರಾಜ್ ರಾಯರೆಡ್ಡಿ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಡಾ. ಎಚ್.ಸಿ. ಮಹದೇವಪ್ಪ, ಟಿ.ಬಿ.ಜಯಚಂದ್ರ, ರೋಷನ್ ಬೇಗ್, ಎಚ್.ಆಂಜನೇಯ, ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಕುಂಟಿಯಾ ಮತ್ತಿತರರು ಉಪಸ್ಥಿತಿರಿದ್ದರು.
ಅಂಬೇಡ್ಕರ್ ಭವನದಲ್ಲಿ ಕಿಕ್ಕಿರಿದು ತುಂಬಿದ ಜನಸಾಗರ ದಿಂದಾಗಿ ತಡವಾಗಿ ಬಂದ ಸಚಿವ ಎಚ್.ಎಂ. ರೇವಣ್ಣ ಗೆ ಜಾಗ ಸಿಗದೆ ಜನರ ಮಧ್ಯೆಯೇ ಕುಳಿತು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.