Mansoon: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಭಾಗಗಳಲ್ಲಿ ಜೂ.16ರವರೆಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇತ್ತೀಚಿಗೆ ಆರಂಭವಾಗಿ ಕೊಂಚ ಬಿಡುವು ಪಡೆದುಕೊಂಡಿದ್ದ ಮುಂಗಾರು (Mansoon) ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದ್ದು ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ.

Written by - Yashaswini V | Last Updated : Jun 12, 2021, 09:25 AM IST
  • ರಾಜ್ಯದ ಹಲವು ಭಾಗಗಳಲ್ಲಿ ಇಂದಿನಿಂದ ಧಾರಾಕಾರ ಮಳೆ ಸಾಧ್ಯತೆ
  • ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿರುವ ವರುಣ
  • ಕರಾವಳಿ ಜಿಲ್ಲೆಗಳಲ್ಲಿ ಜೂನ್ 16ರವರೆಗೆ ಆರೆಂಜ್ ಅಲರ್ಟ್ ಘೋಷಣೆ
Mansoon: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಭಾಗಗಳಲ್ಲಿ ಜೂ.16ರವರೆಗೆ ಆರೆಂಜ್ ಅಲರ್ಟ್ title=
ರಾಜ್ಯದ ಹಲವು ಭಾಗಗಳಲ್ಲಿ ಇಂದಿನಿಂದ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದಿನಿಂದ ಧಾರಾಕಾರ ಮಳೆಯಾಗಲಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ ಭಾಗಗಳಲ್ಲಿ ಇಂದಿನಿಂದ ಜೂನ್ 16ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇತ್ತೀಚಿಗೆ ಆರಂಭವಾಗಿ ಕೊಂಚ ಬಿಡುವು ಪಡೆದುಕೊಂಡಿದ್ದ ಮುಂಗಾರು (Mansoon) ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದ್ದು ಗುಡುಗು-ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ.

ಇದನ್ನೂ ಓದಿ - New Guidelines : ರಾಜ್ಯ ಸರ್ಕಾರದಿಂದ 'ಅನ್ ಲಾಕ್' ಹೊಸ ಮಾರ್ಗಸೂಚಿ ಪ್ರಕಟ!

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ ಸುಮಾರು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಧಾರಾಕಾರ ಮಳೆ (Heavy Rain) ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಈ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಅಂದರೆ ಜೂನ್ 16ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಳಿಗ್ಗೆ 8:30ರಿಂದ ಜೂನ್ 16ರ ಬೆಳಿಗ್ಗೆ 8:30ರವರೆಗೆ ಇಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿರಲಿದೆ. ಇದಲ್ಲದೆ ಈ ಭಾಗಗಳಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ - First PUC Exam 2021 : 'ಪ್ರಥಮ PUC' ವಿದ್ಯಾರ್ಥಿಗಳಿಗೆ ಬಿಗ್ ಶಾಕ್..!

ಇದಲ್ಲದೆ ಜೂನ್ 14-15 ರಂದು ಬೆಳಗಾವಿ, ಹಾವೇರಿ, ಧಾರವಾಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News