Govt Employees : ರಾಜ್ಯ ಸರ್ಕಾರಿದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..! 

ಆರು ತಿಂಗಳವರೆಗೆ ಚಿಕಿತ್ಸೆಗಾಗಿ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಿ ಆದೇಶಿಸಿದೆ

Last Updated : Jun 23, 2021, 04:42 PM IST
  • ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯ ಮೇರೆಗೆ
  • ರಾಜ್ಯ ಸರ್ಕಾರವು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವಂತ ನೌಕರರಿಗೆ
  • ಆರು ತಿಂಗಳವರೆಗೆ ಚಿಕಿತ್ಸೆಗಾಗಿ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಿ ಆದೇಶಿಸಿದೆ
Govt Employees : ರಾಜ್ಯ ಸರ್ಕಾರಿದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!  title=

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯ ಮೇರೆಗೆ, ರಾಜ್ಯ ಸರ್ಕಾರವು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವಂತ ನೌಕರರಿಗೆ, ಆರು ತಿಂಗಳವರೆಗೆ ಚಿಕಿತ್ಸೆಗಾಗಿ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಿ ಆದೇಶಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ಬಿಎಸ್ ಸುವರ್ಣ ಅವರು ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಸರ್ಕಾರಿ ನೌಕರರು(Govt Employees) ಕ್ಯಾನ್ಸರ್ ಕಾಯಿಲೆಗೆ ಸಂಬಂಧಿಸಿದಂತೆ ವೈದ್ಯರ ಸಹಲೆಯ ಮೇರೆಗೆ ಕಿಮೋ, ರೇಡಿಯೋ ಥೆರಪಿಯಂತಹ ಚಿಕಿತ್ಸೆಗೆ ಒಳಪಡಬೇಕಿದ್ದು, ಆ ನಿಮಿತ್ತವಾಗಿ ಕಡ್ಡಾಯವಾಗಿ ವಿಶ್ರಾಂತಿಯನ್ನು ಪಡೆಯಬೇಕಿರುವ ಅವಶ್ಯಕತೆಯಿರುವುದರ ಮೇರೆಗೆ, ಕಚೇರಿಗೆ ಹಾಜರಾಗುವುದು ಕಷ್ಟವಾಗುತ್ತದೆ. ಇದರಿಂದಾಗಿ ವೈದ್ಯಕೀಯ ಪ್ರಮಾಣ ಪತ್ರದ ಆಧಾರ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಪರಿಗಣಿಸುವಂತೆ ಸರ್ಕಾರಿ ನೌಕರರ ಸಂಘವು ಕೋರಿರುತ್ತದೆ.

ಇದನ್ನೂ ಓದಿ : MTB Nagaraj : ಸಚಿವ ಎಂಟಿಬಿ ನಾಗರಾಜ್ ಗೆ ಮಹತ್ವದ ಜವಾಬ್ದಾರಿ ನೀಡಿದ ಸಿಎಂ ಬಿಎಸ್‌ವೈ!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(Karnataka State Government Employees Association)ದ ಮನವಿ ಮೇರೆಗೆ, ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನುಬಂಧ-ಬಿ ರಲ್ಲಿನ ನಿಯಮ 11(ಐ)ರ ನಂತ್ರದಲ್ಲಿ ಈ ಆದೇಶವನ್ನು ಹೊರಡಿಸಿದ ದಿನಾಂಕದಿಂದ ಜಾರಿಗೊಳ್ಳುವಂತೆ ನಿಯಮ 11(ಜೆ) ಎಂಬ ಹೊಸ ನಿಯಮವನ್ನು ಸೇರ್ಪಡೆಗೊಳಿಸಿದೆ.

ಇದನ್ನೂ ಓದಿ : Siddaramaiah : ಸಿದ್ದಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!

ನಿಯಮ 11(ಜೆ)ರಂತೆ, ಕ್ಯಾನ್ಸರ್(Cancer) ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸಾ ತಜ್ಞರು ರೂಪಿಸುವ ಯೋಜನೆಯನುಸಾರ ಪಡೆಯುವ ಕಿಮೋ, ರೇಡಿಯೋ ಥೆರಪಿ ಚಿಕಿತ್ಸೆ ಮತ್ತು ಸಂಬಂಧದಲ್ಲಿ ಅಗತ್ಯವಾಗುವ ವಿಶ್ರಾಂತಿಯ ಅವಧಿಯ ದಿನಗಳಿಗೆ, ಸಕ್ಷಮ ವೈದ್ಯಕೀಯ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಪಡೆದು, ಒದಗಿಸುವ ಷರತ್ತಿಗೊಳಪಟ್ಟು, ಈ ಚಿಕಿತ್ಸೆಯ ಅವಧಿಯಲ್ಲಿ ಮಾತ್ರ ಗರಿಷ್ಠ ಆರು ತಿಂಗಳುಗಳ ಮಿತಿಗೊಳಪಟ್ಟು, ವಿಶೇಷ ಸಾಂದರ್ಭಿಕ ರಜೆಯನ್ನು ಅನುಮತಿಸತಕ್ಕದ್ದು ಎಂದಿದ್ದಾರೆ.

ಇದನ್ನೂ ಓದಿ : BPL Cards Holders : ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.99 ಲಕ್ಷ ಅನರ್ಹ 'BPL ಕಾರ್ಡ್ ಗಳು ಪತ್ತೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News