ಸುಪ್ರೀಂಕೋರ್ಟ್ ಎಚ್ಚರಿಕೆ ನಂತರ 10, 12 ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಆಂಧ್ರಪ್ರದೇಶ

ಒಂದೇ ಸಾವನ್ನಪ್ಪಿದರು ಅದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಆಂಧ್ರಪ್ರದೇಶದ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈಗ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

Written by - Zee Kannada News Desk | Last Updated : Jun 24, 2021, 09:53 PM IST
  • ಒಂದೇ ಸಾವನ್ನಪ್ಪಿದರು ಅದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಆಂಧ್ರಪ್ರದೇಶದ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈಗ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
  • ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ 31 ರೊಳಗೆ ರಾಜ್ಯವು ಪರೀಕ್ಷೆಗಳನ್ನು ಆಯೋಜಿಸಲು ಮತ್ತು ಫಲಿತಾಂಶಗಳನ್ನು ಘೋಷಿಸಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶದ ಶಿಕ್ಷಣ ಸಚಿವ ಸುರೇಶ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಎಚ್ಚರಿಕೆ ನಂತರ 10, 12 ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಆಂಧ್ರಪ್ರದೇಶ title=
ಸಂಗ್ರಹ ಚಿತ್ರ

ನವದೆಹಲಿ: ಒಂದೇ ಸಾವನ್ನಪ್ಪಿದರು ಅದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಆಂಧ್ರಪ್ರದೇಶದ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈಗ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ 31 ರೊಳಗೆ ರಾಜ್ಯವು ಪರೀಕ್ಷೆಗಳನ್ನು ಆಯೋಜಿಸಲು ಮತ್ತು ಫಲಿತಾಂಶಗಳನ್ನು ಘೋಷಿಸಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶದ ಶಿಕ್ಷಣ ಸಚಿವ ಸುರೇಶ್ ಹೇಳಿದ್ದಾರೆ.ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸರ್ಕಾರ ಮುಂದಿಟ್ಟರೆ ಪ್ರತಿ ಸಾವಿನ ಸಂದರ್ಭದಲ್ಲಿ (ಪರೀಕ್ಷೆಯ ಸಮಯದಲ್ಲಿ ಕೋವಿಡ್ ಕಾರಣ) 1 ಕೋಟಿ ರೂ ಪರಿಹಾರವಾಗಿ ಆದೇಶಿಸಬೇಕಾಗಬಹುದು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

ಇದನ್ನೂ ಓದಿ: ಕೋವಿಡ್ ಸಂತ್ರಸ್ತರಿಗೆ ₹ 4 ಲಕ್ಷ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ

"ಒಂದು ಸಾವು ಕೂಡ ಇದ್ದರೆ, ನಾವು 1 ಕೋಟಿ ಪರಿಹಾರಕ್ಕೆ ಆದೇಶಿಸಬಹುದು...ಇತರ ಮಂಡಳಿಗಳು ರದ್ದುಗೊಳಿಸಿರುವ ಸಂದರ್ಭದಲ್ಲಿ ಆಂಧ್ರಪ್ರದೇಶ ವೇಕೆ ಭಿನ್ನವಾಗಿರಲು ಬಯಸುತ್ತದೆ ಎಂದು ?" ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ಎರಡು ಸದಸ್ಯರ ಪೀಠ ಇಂದು ಬೆಳಿಗ್ಗೆ ಹೇಳಿದೆ.

ಇದನ್ನೂ ಓದಿ: CBSE 12th Board:12ನೇ ತರಗತಿಯ ಮೌಲ್ಯಮಾಪನ ಹೇಗಿರಲಿದೆ? CBSE ಸಿದ್ಧಪಡಿಸಿದೆ ಈ ಸ್ಪೆಷಲ್ ಪ್ಲಾನ್ !

ಕಳೆದ ಮೂರು ತಿಂಗಳುಗಳಲ್ಲಿ ದೇಶಾದ್ಯಂತ ಸಾವಿರಾರು ಜನರನ್ನು ಬಲಿ ತೆಗೆದುಕೊಂಡ ಕರೋನವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದಾಗಿ ಸಿಬಿಎಸ್‌ಇ ಮತ್ತು ಐಎಸ್‌ಸಿಇ - ದೇಶದ ಎರಡು ದೊಡ್ಡ ಶಿಕ್ಷಣ ಮಂಡಳಿಗಳು ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿವೆ. ರಾಜ್ಯ ಮಂಡಳಿಗಳಲ್ಲಿ ಹೆಚ್ಚಿನವರು 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿದ್ದಾರೆ.ಆದಾಗ್ಯೂ, ಕರೋನವೈರಸ್ ಪರಿಸ್ಥಿತಿ ಸುಧಾರಿಸಿದ್ದರಿಂದ ಪರೀಕ್ಷೆಗಳನ್ನು ನಡೆಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ.ನ್ಯಾಯಾಲಯವು ಇಂದು ರಾಜ್ಯದ ಯೋಜನೆಯ ಬಗ್ಗೆ ಮನವರಿಕೆಯಾಗಿಲ್ಲ ಎಂದು ಹೇಳಿದೆ.

"ಇತರ ಮಂಡಳಿಗಳು ವಾಸ್ತವತೆಯ ಆಧಾರದ ಮೇಲೆ ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಂಡಿವೆ. ಹೊಸ ರೂಪಾಂತರವಿದೆ - 'ಡೆಲ್ಟಾ ಪ್ಲಸ್'. ಇದು ನಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಯಾರಿಗೂ ಸ್ಪಷ್ಟವಾಗಿಲ್ಲ ... ಈ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಯಾರು ತೆಗೆದುಕೊಂಡರು ಮತ್ತು ಈ  ನಿರ್ಧಾರಕ್ಕೆ ಇರುವ ಮಾನದಂಡಗಳೇನು ಎಂದು ಕೋರ್ಟ್ ಪ್ರಶ್ನಿಸಿದೆ.

ಇದನ್ನೂ ಓದಿ: ಗುಣಮುಖರಾದ ನಂತರ ಅಭಿಮಾನಿಗಳಿಗೆ ಕೃತಜ್ಞತೆಗಳನ್ನು ತಿಳಿಸಿದ ನಟಿ ಶಬಾನಾ ಅಜ್ಮಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News