ನವದೆಹಲಿ: ಉತ್ತರ ಪ್ರದೇಶ ಸರ್ಕಾರದ 2021-2030ರ ಹೊಸ ಜನಸಂಖ್ಯಾ ನೀತಿಯನ್ನು ಸ್ವಾಗತಿಸಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಗತ್ಯವಿದ್ದರೆ, ಇಡೀ ದೇಶಕ್ಕೆ ಅಂತಹ ಕಾನೂನನ್ನು ರೂಪಿಸಬೇಕು ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್ (Devendra Fadnavis), ಜನಸಂಖ್ಯೆ ಸ್ಫೋಟ ಇರುವ ರಾಜ್ಯಗಳಲ್ಲಿ ಇಂತಹ ಕಾನೂನು ಇರಬೇಕು ಎಂದು ಪಿಟಿಐ ತಿಳಿಸಿದ್ದಾರೆ.
ಇದನ್ನೂ ಓದಿ: "ಶಿವಸೇನಾ ಪಕ್ಷವು ಎಂದಿಗೂ ನಮ್ಮ ಶತ್ರುವಲ್ಲ"- ದೇವೇಂದ್ರ ಫಡ್ನವೀಸ್
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಉತ್ತರ ಪ್ರದೇಶ ಜನಸಂಖ್ಯಾ ನೀತಿಯನ್ನು 2021-2030ರ ಅನಾವರಣಗೊಳಿಸಿದರು.ಯುಪಿ ಸರ್ಕಾರವು ಇತ್ತೀಚೆಗೆ ತನ್ನ ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ರಾಜ್ಯದ ಕಾನೂನು ಆಯೋಗದ ವೆಬ್‌ಸೈಟ್‌ನಲ್ಲಿ ಹಾಕಿದ್ದು, ಯುಪಿಯಲ್ಲಿ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದರಿಂದ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದರಿಂದ ಅಥವಾ ಯಾವುದೇ ರೀತಿಯ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸಲಾಗುವುದು ಎಂದು ಉಲ್ಲೇಖಿಸಿದೆ.
ಇದನ್ನೂ ಓದಿ: ಪಿಎಂ ಮೋದಿ, ಫಡ್ನವಿಸ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್, 54 ಜನರ ಮೇಲೆ ಪ್ರಕರಣ ದಾಖಲು
ಅಂತಹ ಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವುದನ್ನು ಇದು ನಿಷೇಧಿಸುತ್ತದೆ, ಆದರೆ ತಮ್ಮ ಮಕ್ಕಳನ್ನು ಎರಡಕ್ಕೆ ಸೀಮಿತಗೊಳಿಸುವವರಿಗೆ ಪ್ರೋತ್ಸಾಹ ಧನ ನೀಡುತ್ತದೆ.ಹೆಚ್ಚು ಸಮನಾದ ವಿತರಣೆಯೊಂದಿಗೆ ಸುಸ್ಥಿರ ಅಭಿವೃದ್ಧಿಯ ಉತ್ತೇಜನಕ್ಕಾಗಿ ರಾಜ್ಯದ ಜನಸಂಖ್ಯೆಯನ್ನು ನಿಯಂತ್ರಿಸುವುದು ಮತ್ತು ಸ್ಥಿರಗೊಳಿಸುವುದು ಅಗತ್ಯ ಎಂದು ಕರಡು ಹೇಳುತ್ತದೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಫಡ್ನವೀಸ್, "ಅಗತ್ಯವಿದ್ದರೆ, ಅಂತಹ ಕಾನೂನನ್ನು ಇಡೀ ದೇಶಕ್ಕೂ ರೂಪಿಸಬೇಕು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.'ನಾವು ಇದನ್ನು ಚೀನಾದಂತೆ ಮಾಡಲು ಬಯಸುವುದಿಲ್ಲ, ಆದರೆ ಅದೇ ಸಮಯದಲ್ಲಿ ನಾವು ನಮ್ಮ ಜನಸಂಖ್ಯೆಯನ್ನು ನಿಯಂತ್ರಿಸಬೇಕಾಗಿದೆ. ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತೇವೆ ಮತ್ತು ಪ್ರೋತ್ಸಾಹದ ಮೂಲಕ ನಾವು ಅಂತಹ ಕಾನೂನನ್ನು ಜಾರಿಗೊಳಿಸಿದರೆ, ನಾವು ಖಂಡಿತವಾಗಿಯೂ ನಮ್ಮ ಜನಸಂಖ್ಯೆಯನ್ನು ನಿಯಂತ್ರಿಸಬಹುದು'ಎಂದು ಅವರು ಹೇಳಿದರು.
ಇದನ್ನೂ ಓದಿ: Lockdown: 15 ದಿನ ಲಾಕ್‌ಡೌನ್? ಸಿಎಂ ಇಂದು ಅಂತಿಮ ನಿರ್ಧಾರ!
ವಿಶೇಷವೆಂದರೆ, ಯುಪಿ ಸರ್ಕಾರ ತನ್ನ ಹೊಸ ನೀತಿಯ ಭಾಗವಾಗಿ, ಜನಸಂಖ್ಯೆ ನಿಯಂತ್ರಣಕ್ಕೆ ಸಹಾಯ ಮಾಡಲು ಜನರನ್ನು ಉತ್ತೇಜಿಸುತ್ತದೆ ಎಂದು ಹೇಳಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.