ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಸೋಮವಾರ (ಜುಲೈ 19) ರಾಜ್ಯಸಭೆಯಲ್ಲಿ ಸದನದ ಉಪನಾಯಕರನ್ನಾಗಿ ನೇಮಿಸಲಾಗಿದೆ.
"ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ (Mukhtar Abbas Naqvi) ಅವರನ್ನು ರಾಜ್ಯಸಭೆಯ ಉಪನಾಯಕನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಪ್ರಧಾನಿ ಮೋದಿ ನನಗೆ ನಿರ್ದೇಶನ ನೀಡಿದ್ದಾರೆ" ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಲಿಖಿತ ಸಂವಹನದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕಾನೂನು ಜಾರಿಯಾದಾಗಿನಿಂದ ತ್ರಿವಳಿ ತಲಾಖ್ ಪ್ರಕರಣಗಳಲ್ಲಿ ಶೇ 82 ರಷ್ಟು ಕುಸಿತ- ಮುಖ್ತಾರ್ ಅಬ್ಬಾಸ್ ನಖ್ವಿ
ನಖ್ವಿ ಪ್ರಸ್ತುತ ನರೇಂದ್ರ ಮೋದಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಏಕೈಕ ವ್ಯಕ್ತಿಯಾಗಿದ್ದಾರೆ.ಅವರು ಜುಲೈ 2016 ರಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿಯೂ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ: ಸ್ವಚ್ಚತೆ ಈಗ ಜನರಿಗೆ ಅಭ್ಯಾಸವಾಗಿದೆ: ಮುಖ್ತಾರ್ ಅಬ್ಬಾಸ್ ನಖ್ವಿ
ಏತನ್ಮಧ್ಯೆ, ಮಾನ್ಸೂನ್ ಅಧಿವೇಶನದ ಮೊದಲ ದಿನದಂದು ಪದೇ ಪದೇ ಅಡ್ಡಿಪಡಿಸಿದ ನಂತರ ಲೋಕಸಭೆಯನ್ನು ದಿನಕ್ಕೆ ಮುಂದೂಡಲಾಯಿತು.ಪ್ರತಿಪಕ್ಷಗಳು ಇಂಧನ ಬೆಲೆ ಏರಿಕೆ ಮತ್ತು ಪೆಗಾಸಸ್ ವಿವಾದಗಳ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು .
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ