Kisan Credit Card: ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವ ವೇಳೆ ನೀವು ಕೂಡಾ ಈ ತಪ್ಪು ಮಾಡಿಲ್ಲ ತಾನೇ?

Kisan Credit Card :ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕಾದರೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಈ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ  ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ. 

Written by - Ranjitha R K | Last Updated : Jul 19, 2021, 08:36 PM IST
  • ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಯೋಜನವನ್ನು ನೀಡಲಾಗುತ್ತದೆ.
  • ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕಾದರೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
  • ಯಾವ ದಾಖಲೆಗಳ ಅಗತ್ಯವಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ
Kisan Credit Card: ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವ ವೇಳೆ ನೀವು ಕೂಡಾ ಈ ತಪ್ಪು ಮಾಡಿಲ್ಲ ತಾನೇ?  title=
ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಯೋಜನವನ್ನು ನೀಡಲಾಗುತ್ತದೆ (photo india.com)

ನವದೆಹಲಿ : Kisan Credit Card : ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿರುವ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಯೋಜನವನ್ನು ನೀಡಲಾಗುತ್ತದೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮನ್ ಯೋಜನೆ (PM Kisan samman yojana)  ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಲಿಂಕ್ ಮಾಡಿದೆ. ಈ ಕಾರ್ಡ್ ಮೂಲಕ ರೈತರಿಗೆ ಸಮಂಜಸವಾದ ದರದಲ್ಲಿ ಸಾಲ ನೀಡಲಾಗುತ್ತದೆ.

ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಪಡೆಯಬೇಕಾದರೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಈ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ  ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.  ಈ ಕೆಳಗಿನ ದಾಖಲೆಗಳ ಆಧಾರದ ಮೇಲೆ ನೀಡಲಾಗುತ್ತದೆ. ಈ ಕಾರ್ಡ್ ಪಡೆಯಬೇಕಾದರೆ ಏನು ಮಾಡಬೇಕು? ಯಾವ ದಾಖಲೆಗಳ ಅಗತ್ಯವಿದೆ ನೋಡೋಣ .

ಇದನ್ನೂ ಓದಿ:  ನಿಮ್ಮ ಬಳಿ ಈ ಹಳೆಯ ನೋಟುಗಳಿದ್ದರೆ ಸಿಗುತ್ತೆ 3 ಲಕ್ಷ ರೂ.: ಹೇಗೆಂದು ತಿಳಿಯಿರಿ...

ಮೊದಲನೆಯದಾಗಿ ಇದಕ್ಕಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಇದರೊಂದಿಗೆ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ (PAN Card), ಪಾಸ್ಪೋರ್ಟ್, ಆಧಾರ್ ಕಾರ್ಡ್ (Aadhaar) ಮತ್ತು ಚಾಲನಾ ಪರವಾನಗಿ ಇತ್ಯಾದಿಗಳನ್ನು ಸಲ್ಲಿಸಬೇಕು. ಇದಲ್ಲದೆ, ನೀವು ಬೇರೆ ಯಾವುದೇ ಬ್ಯಾಂಕಿನಿಂದ ಸಾಲ ಪಡೆದಿಲ್ಲ ಎನ್ನುವುದನ್ನು ಖಾತ್ರಿ ಪಡಿಸಿಕೊಳ್ಳಲು ಬ್ಯಾಂಕುಗಳಿಂದ ಎನ್ ಒಸಿ (NOC) ತೆಗೆದುಕೊಳ್ಳಬೇಕಾಗುತ್ತದೆ. 

ಇನ್ನು ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವಾಗ, ನಿಮ್ಮ ಹಳೆಯ ಕೃಷಿ ಸಾಲದ ಬಗೆಗಿನ ಸಂಪೂರ್ಣ ಮಾಹಿತಿ ನೀಡಬೇಕಾಗುತ್ತದೆ. ಅದರ ಬಗ್ಗೆ ಸರಿಯಾದ ಮಾಹಿತಿಯನ್ನು ಒದಗಿಸದಿದ್ದರೆ, ನಿಮ್ಮ ಕಿಸಾನ್  ಕ್ರೆಡಿಟ್ ಕಾರ್ಡ್ ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಅಥವಾ ಕಿಸಾನ್  ಕ್ರೆಡಿಟ್ ಕಾರ್ಡ್ ನೀಡಲಾಗುವುದಿಲ್ಲ.

ಇದನ್ನೂ ಓದಿ:  PM Kisan : ಯಾವಾಗ ಖಾತೆ ಸೇರಲಿದೆ 9ನೇ ಕಂತು ? ಇಲ್ಲಿದೆ ಸಂಪೂರ್ಣ ಮಾಹಿತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News