31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ನಟಿ ಕೃತಿ ಸನೊನ್.
ಬಾಲಿವುಡ್ ಬೆಡಗಿ ಕೃತಿ ಸನೊನ್ ಹುಟ್ಟುಹಬ್ಬದ ಸಂಭ್ರಮದ ಲ್ಲಿದ್ದಾರೆ. ಮಂಗಳವಾರ ಅವರು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ ವಿಭಿನ್ನ ನಟನೆಯ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೃತಿ ಅಪಾರ ಫ್ಯಾನ್ಸ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶುಭ ಕೋರಿದ್ದಾರೆ.
ಬಾಲಿವುಡ್ ಬೆಡಗಿ ಕೃತಿ ಸನೊನ್ ಹುಟ್ಟುಹಬ್ಬಕ್ಕೆ ‘ಮಿಮಿ’ ಚಿತ್ರತಂಡ ವಿಶಿಷ್ಟವಾಗಿ ಶುಭ ಕೋರಿದೆ. ನಟಿಯ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯ 4 ದಿನ ಮುಂಚಿತವಾಗಿಯೇ ಒಟಿಟಿ ಪ್ಲಾಟ್ಫಾರ್ಮ್ ನಲ್ಲಿ ‘ಮಿಮಿ’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಇದೇ ಜುಲೈ 30ರಂದು ಈ ಚಿತ್ರವನ್ನು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ ಈಗ ನೆಟ್‌ಫ್ಲಿಕ್ಸ್ ಮತ್ತು ಜಿಯೋ ಸಿನೆಮಾದಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಪಂಕಜ್ ತ್ರಿಪಾಠಿ ಮತ್ತು ಸುಪ್ರಿಯಾ ಪಾಠಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ನಟಿ ಕೃತಿ ಸನೊನ್ ಅವರ ಅತ್ಯುತ್ತಮ ಚಿತ್ರಗಳಲ್ಲಿ ‘ಬರೇಲಿ ಕಿ ಬರ್ಫಿ’ಕೂಡ ಒಂದು. 2017 ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾವನ್ನು ಅಶ್ವಿನಿ ಅಯ್ಯರ್ ತಿವಾರಿ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ, ರಾಜ್‌ಕುಮಾರ್ ರಾವ್ ಮತ್ತು ಪಂಕಜ್ ತ್ರಿಪಾಠಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು.
ಈ ಚಿತ್ರದಲ್ಲಿ ಕೃತಿ ಸನೊನ್ ಮತ್ತು ಬಾಲಿವುಡ್ ನ ಮೋಹಕ ನಟ, ದಿವಂಗತ ಸುಶಾಂತ್ ಸಿಂಗ್ ರಜಪೂತ್ ಮುಖ್ಯಪಾತ್ರಗಳಲ್ಲಿ ನಟಿಸಿದ್ದರು. ಆದರೆ ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಆದರೆ ಸುಶಾಂತ್ ಸಿಂಗ್ ಮತ್ತು ಕೃತಿ ಅವರ ಜೋಡಿ ತೆರೆಯ ಮೇಲೆ ಮೋಡಿ ಮಾಡಿತ್ತು. ಪ್ರತಿಯೊಬ್ಬರಿಗೂ ಈ ಚಿತ್ರ ಮೆಚ್ಚುಗೆಯಾಗಿತ್ತು. 2017ರಲ್ಲಿ ತೆರೆಕಂಡ ಈ ಚಿತ್ರವನ್ನು ದಿನೇಶ್ ವಿಜನ್ ನಿರ್ದೇಶಿಸಿದ್ದರು. ದೀಪಿಕಾ ಪಡುಕೋಣೆ, ರಾಜ್ ಕುಮಾರ್ ರಾವ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
2019ರಲ್ಲಿ ತೆರೆಕಂಡ ‘ಲುಕಾ ಚುಪ್ಪಿ’ ಸಿನಿಮಾ ಸಖತ್ ಸದ್ದು ಮಾಡಿತ್ತು. ಈ ಚಿತ್ರದ ಹಾಡುಗಳು ಇಂದಿಗೂ ಕೂಡ ಜನಪ್ರಿಯವಾಗಿವೆ. ಚಿತ್ರದಲ್ಲಿ ಕೃತಿ ಸನೊನ್ ಮತ್ತು ಕಾರ್ತಿಕ್ ಆರ್ಯನ್ ಮುಖ್ಯ ಪಾತ್ರಗಳಲ್ಲಿದ್ದರು. ಇದನ್ನು ಲಕ್ಷ್ಮಣ್ ಉಟೆಕರ್ ನಿರ್ದೇಶಿಸಿದ್ದು, ಗಲ್ಲಾಪೆಟ್ಟಿಗೆಯಲ್ಲೂ ಇದು ಯಶಸ್ಸು ಕಂಡಿತ್ತು.
‘ಹೌಸ್‌ಫುಲ್ 4’ ಬಾಲಿವುಡ್ ನಲ್ಲಿ ಸಖತ್ ಸದ್ದು ಮಾಡಿದ ಸಿನಿಮಾ. ಬಹುತಾರಾಗಣದಲ್ಲಿ ಮೂಡಿಬಂದಿದ್ದ ಈ ಚಿತ್ರವನ್ನು ಫರ್ಹಾದ್ ಸಂಜಿ ನಿರ್ದೇಶಿಸಿದ್ದಾರೆ. ಕೃತಿ ಮಾತ್ರವಲ್ಲದೆ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಪೂಜಾ ಹೆಗ್ಡೆ, ಕೃತಿ ಕರಬಂದಾ ಮತ್ತು ರಿತೇಶ್ ದೇಶಮುಖ್ ಕೂಡ ಇದ್ದರು. 2019ರಲ್ಲಿ ತೆರೆಕಂಡ ಈ ಸಿನಿಮಾ ಪ್ರೇಕ್ಷಕರ ಮನಸೂರೆಗೊಂಡಿತ್ತು.
ದಿಲ್ವಾಲೆ ಸಿನಿಮಾ 2015 ರಲ್ಲಿ ಬಿಡುಗಡೆಯಾಗಿದ್ದು, ಇದನ್ನು ರೋಹಿತ್ ಶೆಟ್ಟಿ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್, ಕಾಜೋಲ್ ಮತ್ತು ವರುಣ್ ಧವನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.