ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿರುವುದರಿಂದ ಮನನೊಂದು ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ(ರವಿ) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಅಭಿಮಾನಿಯ ಆತ್ಮಹತ್ಯೆಯ ಸುದ್ದಿ ಕೇಳಿ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ: DK Shivakumar : 'ಹೆಣದಲ್ಲೂ ಹಣ ಲೂಟಿ ಹೊಡೆಯುವ ಸರ್ಕಾರವಿದು'
ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಬಿಜೆಪಿ 2ನೇ ವರ್ಷದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ(BS Yediyurappa) ಅತ್ಯಂತ ಭಾವುಕರಾಗಿ ಮಾತನಾಡಿದ್ದರು. ಕಣ್ಣೀರಿಡುತ್ತಲೇ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಕಣ್ಣೀರಿಡುತ್ತಲೇ ಸಿಎಂ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ನೀಡಿದ್ದು ಅವರ ಅಸಂಖ್ಯಾತ ಅಭಿಮಾನಿಗಳಿಗೆ ನೋವು ತಂದಿತ್ತು. ಬಿಎಸ್ವೈ ಅಭಿಮಾನಿ ರಾಜಪ್ಪ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Laxman Savadi : 'ವಾಹನ ಮಾಲೀಕ'ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..!
ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ. (2/2)
— B.S. Yediyurappa (@BSYBJP) July 27, 2021
ಇದಕ್ಕೆ ಬೇಸರ ವ್ಯಕ್ತಪಡಿಸಿರುವ ಬಿಎಸ್ವೈ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ‘ನನ್ನ ರಾಜೀನಾಮೆಯಿಂದ ಮನನೊಂದು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ನಾನು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ’ ಅಂತಾ ಟ್ವೀಟ್(Twitter) ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.