CM Basavaraja Bommai Delhi Visit: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಸಂಪುಟ ರಚನೆಯೇ ನನ್ನ ಮೊದಲ ಆದ್ಯತೆ ಎಂದು ಹೇಳಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳುವುದಾಗಿ ತಿಳಿಸಿದರಲ್ಲದೇ, ರಾಜ್ಯ ಸಂಪುಟ ರಚನೆಯ ಬಗ್ಗೆಯೂ ಮಾತುಕತೆ ನಡೆಸುವುದಾಗಿ ಮಾಹಿತಿ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ಸಂಪುಟ ರಚನೆ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿಯಾಗಲಿದ್ದು ಅವರೊಂದಿಗೆ ಕ್ಯಾಬಿನೆಟ್ ರಚನೆಯ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು. ಸಂಪುಟ ರಚನೆಯೇ ನನ್ನ ಮೊದಲ ಆದ್ಯತೆಯಾಗಿದ್ದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡ ಅವರ ಮಾರ್ಗದರ್ಶನವನ್ನು ಎದುರುನೋಡುತ್ತಿರುವುದಾಗಿ ಸಿಎಂ ಮಾಹಿತಿ ನೀಡಿದರು.
Karnataka CM Basavaraj Bommai meets Defence Minister Rajnath Singh in Delhi
Karnataka CM is on a two-day visit to the National Capital pic.twitter.com/apPbpaFKRt
— ANI (@ANI) July 30, 2021
ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai), ಮಧ್ಯಾಹ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ.
ಇದನ್ನೂ ಓದಿ- JDS ಬಲಿಷ್ಠ ಪಕ್ಷವೆಂದ ಅನಂತ್ ಕುಮಾರ್ ಪುತ್ರಿ: ವ್ಯಾಪಕ ಚರ್ಚೆಗೆ ಕಾರಣವಾಯ್ತು ಟ್ವೀಟ್..!
ಈ ಮಧ್ಯೆ ಮಧ್ಯಾಹ್ನ 1 ಗಂಟೆಗೆ ರಾಜ್ಯದಿಂದ ಕೇಂದ್ರ ಸಚಿವರಾಗಿರುವವರು ಮತ್ತು ಸಂಸದರನ್ನು ಭೇಟಿಯಾಗಲಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ- Basavaraj Bommai : ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಪರಸ್ಥಿತಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಮತ್ತೆ ಕೊವೀಡ್-19 ಹೆಚ್ಚಳವಾಗುತ್ತಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಸ್ತುತ ಕರೋನಾ ಪರಿಸ್ಥಿತಿಯ ಬಗ್ಗೆ ಈಗಾಗಲೇ ಹಲವು ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ. ಅದರಲ್ಲೂ ಮುಖ್ಯವಾಗಿ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕರೋನಾವೈರಸ್ ಪ್ರಕರಣಗಳು ಹೆಚ್ಚಾದರೆ ಅದಕ್ಕೆ ಡಿಸಿ ಮತ್ತು ಎಸ್ಪಿಗಳೇ ಜವಾಬ್ದಾರಿ ಎಂದು ತಿಳಿಸಿರುವುದಾಗಿ ವಿವರಿಸಿದರು. ಇದಲ್ಲದೆ ರೈಲು ಮಾರ್ಗವಾಗಿ ಬರುವವರಿಗೂ ಕರೋನಾ ಪರೀಕ್ಷೆ ಮಾಡಿಸಬೇಕು ಎಂದವರು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ